ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಆಗ್ರಹಿಸಿ ಪ್ರತಿಭಟನೆ
ಬಳ್ಳಾರಿ, 11 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಆಗ್ರಹಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷವು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್ಯುಸಿಐನ ಜಿಲ್ಲಾ ಸಮಿತಿ ಸದಸ್ಯರಾದ ಡಾ.
ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಆಗ್ರಹಿಸಿ ಪ್ರತಿಭಟನೆ


ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಆಗ್ರಹಿಸಿ ಪ್ರತಿಭಟನೆ


ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಆಗ್ರಹಿಸಿ ಪ್ರತಿಭಟನೆ


ಬಳ್ಳಾರಿ, 11 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಆಗ್ರಹಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷವು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸ್ಯುಸಿಐನ ಜಿಲ್ಲಾ ಸಮಿತಿ ಸದಸ್ಯರಾದ ಡಾ. ಪ್ರಮೋದ್ ಎನ್. ಅವರು ತಿಳಿಸಿದಂತೆ, ಪಿಂಚಣಿ ಮರುಪರಿಶೀಲನಾ ಕಾರ್ಯಕ್ಕೆ ಪ್ರತಿಯೊಂದು ಹಂತದಲ್ಲೂ ಪ್ರತ್ಯೇಕ ಸಿಬ್ಬಂದಿಯನ್ನು ನೇಮಿಸಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ. ತಾಲೂಕು ಕಚೇರಿ ಮತ್ತು ನಾಡ ಕಚೇರಿಗಳಲ್ಲಿ ಕೂಡ ಇದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಿ. ಮರುಪರಿಶೀಲನೆ ಪ್ರಕ್ರಿಯೆ ಬಗ್ಗೆ ಮತ್ತು ಸಲ್ಲಿಸಬೇಕಾದ ದಾಖಲಾತಿಗಳ ಮಾಹಿತಿಯನ್ನು ಪ್ರತಿಯೊಬ್ಬ ನೈಜ ಫಲಾನುಭವಿಗೂ ತಲುಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪಿಂಚಣಿ ಮರುಪರಿಶೀಲನೆಗಾಗಿ ಪ್ರತಿಯೊಂದು ಹಂತದಲ್ಲೂ ಸಮರ್ಪಕ ಸಂಖ್ಯೆಯ ಸಿಬ್ಬಂದಿಗಳನ್ನು ನೇಮಿಸಬೇಕು. ಬದುಕಿನ ಕೊನೆಗಾಲದಲ್ಲಿ ಆಶ್ರಯವಾಗಿರುವ ಪಿಂಚಣಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಪಿಂಚಣಿ ಕಾರ್ಡ್ ಮಾಡಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿ. ತಡೆಹಿಡಿದಿರುವ ವೃದ್ಧರ, ವಿಧವೆಯರ, ಅಂಗವಿಕಲರ ಪಿಂಚಣಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. 18 ಲಕ್ಷ ಸಂಶಯಾಸ್ಪದರ ಹೆಸರಿನಲ್ಲಿ ಅಮಾಯಕರಿಗೆ ಶಿಕ್ಷೆಯಾಗಬಾರದು ಎಂದು ಅವರು ಆಗ್ರಹಿಸಿದರು.

ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಪ್ರತಿಭಟನಾ ರ್ಯಾಲಿಯಲ್ಲಿ ಆಗಮಿಸಿ ಧರಣಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ರಾಧಕೃಷ್ಣ ಉಪಾಧ್ಯ, ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಮಂಜುಳ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯರುಗಳಾದ ಆರ್. ಸೋಮಶೇಖರ ಗೌಡ, ಶಾಂತಾ, ಗೋವಿಂದ್, ಈಶ್ವರಿ ಕೆ. ಎಂ., ಮತ್ತು ಪಕ್ಷದ ಸದಸ್ಯರುಗಳಾದ ಸುರೇಶ್, ಜಗದೀಶ್, ವಿಜಯಲಕ್ಷ್ಮಿ, ರಾಜ, ರವಿಕಿರಣ್ ಹಾಗೂ ನೂರಾರು ಜನ ಪಿಂಚಿಣಿ ಫಲಾನುಭವಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande