
ಗದಗ, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಸೆ.14ರಿಂದ ಶ್ರೀ ಗಣೇಶ ಹಬ್ಬದ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಗದಿತ ದಿನಗಳು ಹಾಗೂ ಅವಧಿಯಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಾಟವನ್ನು ನಿಷೇಧಿಸಲಾಗಿದೆ.
ಗಣೇಶೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸಂಘಟಕರು ಹಾಗೂ ಸಾರ್ವಜನಿಕರು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, 1, 3, 5, 7, 9, 11, 13, 15, 17, 19, 21 ಹಾಗೂ 23ನೇ ದಿನಗಳಂದು ಮೆರವಣಿಗೆ ಮೂಲಕ ಸ್ಥಳೀಯ ಆಡಳಿತ ನಿಗದಿಪಡಿಸಿರುವ ಸ್ಥಳಗಳಲ್ಲಿ ವಿಸರ್ಜನೆ ಕಾರ್ಯಕ್ರಮಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಮದ್ಯ ಮಾರಾಟ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ನಿಷೇಧಾಜ್ಞೆ ಹೊರಡಿಸಿದ್ದಾರೆ.
ನಿಷೇಧದ ದಿನಾಂಕ ಹಾಗೂ ಅವಧಿ:
- 5ನೇ ದಿನ – ಸೆ.18: ಸೆ.18ರ ಬೆಳಿಗ್ಗೆ 6ರಿಂದ ಸೆ.19ರ ಬೆಳಿಗ್ಗೆ 6ರವರೆಗೆ ಗದಗ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧ.
- 7ನೇ ದಿನ – ಸೆ.20: ಸೆ.20ರ ಬೆಳಿಗ್ಗೆ 6ರಿಂದ ಸೆ.21ರ ಬೆಳಿಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ನಿಷೇಧ.
- 9ನೇ ದಿನ – ಸೆ.22: ಸೆ.22ರ ಬೆಳಿಗ್ಗೆ 6ರಿಂದ ಸೆ.23ರ ಬೆಳಿಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ನಿಷೇಧ.
- 11ನೇ ದಿನ – ಸೆ.24: ಸೆ.24ರ ಬೆಳಿಗ್ಗೆ 6ರಿಂದ ಸೆ.25ರ ಬೆಳಿಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ನಿಷೇಧ.
- 13ನೇ ದಿನ – ಸೆ.26: ಸೆ.26ರ ಬೆಳಿಗ್ಗೆ 6ರಿಂದ ಸೆ.27ರ ಬೆಳಿಗ್ಗೆ 6ರವರೆಗೆ ಮುಳಗುಂದ, ಲಕ್ಷ್ಮೇಶ್ವರ ಹಾಗೂ ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧ.
- 15ನೇ ದಿನ – ಸೆ.28: ಸೆ.28ರ ಬೆಳಿಗ್ಗೆ 6ರಿಂದ ಸೆ.29ರ ಬೆಳಿಗ್ಗೆ 6ರವರೆಗೆ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧ.
- 17ನೇ ದಿನ – ಸೆ.30: ಸೆ.30ರ ಬೆಳಿಗ್ಗೆ 6ರಿಂದ ಅ.1ರ ಬೆಳಿಗ್ಗೆ 6ರವರೆಗೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ವ್ಯಾಪ್ತಿಯಲ್ಲಿ ನಿಷೇಧ.
- 19ನೇ ದಿನ – ಅ.2: ಅ.2ರ ಬೆಳಿಗ್ಗೆ 6ರಿಂದ ಅ.3ರ ಬೆಳಿಗ್ಗೆ 6ರವರೆಗೆ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧ.
- 21ನೇ ದಿನ – ಅ.4: ಅ.4ರ ಬೆಳಿಗ್ಗೆ 6ರಿಂದ ಅ.5ರ ಬೆಳಿಗ್ಗೆ 6ರವರೆಗೆ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿ ಹಾಗೂ ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಲಾಗಿದೆ.
ಮೇಲ್ಕಂಡ ನಿಗದಿತ ದಿನಗಳು ಮತ್ತು ಅವಧಿಯಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾರ್ಗಳು, ಕ್ಲಬ್ಗಳು, ಬಿಯರ್ ಅಂಗಡಿಗಳು ಹಾಗೂ ಭಾರತೀಯ ತಯಾರಿಕಾ ಮದ್ಯದ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.
ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಹಾಗೂ ಮದ್ಯ ಮಾರಾಟಗಾರರು ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಲಯ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಅಬಕಾರಿ ಉಪ ಆಯುಕ್ತರು ಕರ್ನಾಟಕ ಅಬಕಾರಿ ಕಾಯ್ದೆಯಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP