ಬೆಂಗಳೂರು: ಎಸ್ಐಆರ್; ಮತದಾರರಲ್ಲಿ ಜಾಗೃತಿಗೆ 7 ಆಟೋರಿಕ್ಷಾಗಳ ಮೂಲಕ ಪ್ರಚಾರ
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವತಿಯಿಂದ ವಾಹನ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಮಲ್ಲೇಶ್ವರದ ಮತದಾರರ ನೋಂದಣಾಧಿಕಾರಿಗಳ ಕಚೇರಿ ಮುಂಭಾಗದಲ
ಎಸ್ಐಆರ್ ಜಾಗೃತಿ ವಾಹನಗಳಿಗೆ ಚಾಲನೆ


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವತಿಯಿಂದ ವಾಹನ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಮಲ್ಲೇಶ್ವರದ ಮತದಾರರ ನೋಂದಣಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ. ಅವರು ಶುಕ್ರವಾರ ವಾಹನ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಆಯುಕ್ತರಾದ (ಬಿಎನ್‌ಸಿಸಿ) ಪಲ್ಲವಿ, ಪಶ್ಚಿಮ ಪಾಲಿಕೆಯ ವಲಯ-2ರ ಉಪ ಆಯುಕ್ತ ಮಂಜುನಾಥಸ್ವಾಮಿ, ಮತದಾರರ ನೋಂದಣಾಧಿಕಾರಿ ಎಂ. ಶ್ರೀನಿವಾಸ, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಎಸ್‌ಐಆರ್‌ ಚಟುವಟಿಕೆಗಳ ಭಾಗವಾಗಿ ನಕ್ಷೆ ಹೊಂದಾಣಿಕೆ ಇಲ್ಲದ, ಮಾಹಿತಿ ಹೊಂದಿಕೆಯಾಗದ ಹಾಗೂ ವ್ಯತ್ಯಾಸಗಳಿರುವ ಮತದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ವಿಚಾರಣೆ ಪ್ರಕ್ರಿಯೆ ನಡೆಯುತ್ತಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅಥವಾ ನೋಟಿಸ್ ಪಡೆದಿರುವ ಮತದಾರರು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸಬೇಕು ಎಂದು ತಿಳಿಸಲಾಗಿದೆ.

ಈ ಕುರಿತು ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಭಾಷೆಗಳಲ್ಲಿ ಜಾಗೃತಿ ಸಂದೇಶಗಳು ಹಾಗೂ ಮಾಹಿತಿಗಳನ್ನು ಹಾಡುಗಳ ಮೂಲಕ ಪ್ರಸಾರ ಮಾಡುತ್ತಾ ಏಳು ಆಟೋರಿಕ್ಷಾಗಳು ಪಾಲಿಕೆಯ ಎಲ್ಲ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಸಂಚರಿಸಿ ಪ್ರಚಾರ ನಡೆಸಲಿವೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande