
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ನಗರದ ರಸ್ತೆಗಳಲ್ಲಿ ಕಾಣಿಸಿಕೊಂಡಿರುವ ಗುಂಡಿಗಳನ್ನು ವೈಜ್ಞಾನಿಕ ವಿಧಾನದಲ್ಲಿ ಮುಚ್ಚುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಜೆಟ್ ಪ್ಯಾಚ್ ಯಂತ್ರ ಬಳಕೆಯ ಅಭಿಯಾನಕ್ಕೆ ಚಾಲನೆ ನೀಡಿದರು.
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಎಂ.ಎಸ್. ಬಿಲ್ಡಿಂಗ್ ಸಮೀಪ ಜೆಟ್ ಪ್ಯಾಚ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯನ್ನು ಸಚಿವರು ಪರಿಶೀಲಿಸಿದರು.
ಆಧುನಿಕ ತಂತ್ರಜ್ಞಾನ ಬಳಸಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಮುಚ್ಚುವ ಮೂಲಕ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಜಿ., ಅಪರ ಆಯುಕ್ತ ವೆಂಕಟಾಚಲಪತಿ ಆರ್. ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
“ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ವೈಜ್ಞಾನಿಕ ಹಾಗೂ ಗುಣಮಟ್ಟದ ವಿಧಾನದಲ್ಲಿ ಮುಚ್ಚಲು ಜೆಟ್ ಪ್ಯಾಚ್ ಯಂತ್ರದ ಬಳಕೆಗೆ ಚಾಲನೆ ನೀಡಲಾಗಿದೆ. ರಸ್ತೆ ದುರಸ್ತಿ ಕಾರ್ಯವನ್ನು ವೇಗವಾಗಿ ಕೈಗೊಂಡು ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ನಮ್ಮ ಉದ್ದೇಶ” ಎಂದು ಕೃಷ್ಣ ಬೈರೇಗೌಡ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R