
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ವಂದೇ ಮಾತರಂ’ ಗೀತೆಯನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ನಿಲುವನ್ನು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶಭಕ್ತಿಯ ಭಾವನೆ ಮೂಡಿಸಿದ ‘ವಂದೇ ಮಾತರಂ’ ಗೀತೆಗೆ ಗೌರವವಿದೆ. ಆದರೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನ್ನದೇ ಆದ ಮಾರ್ಗಸೂಚಿಯನ್ನು ರೂಪಿಸಿದೆ ಎಂದು ನಾಯಕರು ತಿಳಿಸಿದ್ದಾರೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಈ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ಪಕ್ಷವು ‘ವಂದೇ ಮಾತರಂ’ಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಆರೋಪಗಳನ್ನು ನಾಯಕರು ತಳ್ಳಿಹಾಕಿದ್ದು, ಗೀತೆಯ ಬಗ್ಗೆ ಪಕ್ಷದ ಗೌರವ ಹಾಗೂ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಪಕ್ಷದೊಳಗಿನ ಕೆಲ ನಾಯಕರ ಹೇಳಿಕೆಗಳಿಂದ ಭಿನ್ನಾಭಿಪ್ರಾಯದ ಚರ್ಚೆಯೂ ಮುನ್ನೆಲೆಗೆ ಬಂದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R