






ಬಳ್ಳಾರಿ (ರೂಪನಗುಡಿ), 12 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ತಾಲ್ಲೂಕಿನ ರೂಪನಗುಡಿಯ ಗ್ರಾಪಂ ಆವರಣದಲ್ಲಿ ಶನಿವಾರ ನಡೆದ `ಪ್ರಜಾಸೇವೆ' ಆಂದೋಲನ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಇಲಾಖಾವಾರು ಪ್ರತ್ಯೇಕ ಕೌಂಟರ್ಗಳ ವ್ಯವಸ್ಥೆಯನ್ನು ಮಾಡಲಾಗಿತ್ತು.
ಸಾರ್ವಜನಿಕರಿಂದ ವಿವಿಧ ಬೇಡಿಕೆ ಹಾಗೂ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಲು ಕಂದಾಯ ಇಲಾಖೆ, ಕೃಷಿ ಇಲಾಖೆ, ಭೂ ದಾಖಲೆ ಇಲಾಖೆ, ಪಶುಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗಿತ್ತು. ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.
ಶಾಸಕ ಬಿ. ನಾಗೇಂಧ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಬಳ್ಳಾರಿ ತಾಲ್ಲೂಕು ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ್ ಗೌಡ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೆರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಉಪವಿಭಾಗಾಧಿಕಾರಿ ರಾಜೇಶ್ ಹೆಚ್.ಡಿ., ತಹಶೀಲ್ದಾರರಾದ ಟಿ.ರೇಖಾ, ತಾಪಂ ಇಓ ಶ್ರೀಧರ್ ಐ.ಬಾರೀಕರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್