ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆಗೆ ಅದ್ಧೂರಿ ಚಾಲನೆ; ಜಿನ್ಪಿಂಗ್ ಭಾರತಕ್ಕೆ ಪ್ರಯಾಣ
ನವದೆಹಲಿ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಗೆ ನವದೆಹಲಿಯಲ್ಲಿ ಶನಿವಾರ ಅದ್ಧೂರಿ ಚಾಲನೆ ದೊರೆತಿದ್ದು, ಎರಡು ದಿನಗಳ ಶೃಂಗಸಭೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಚೀನಾದ
भारत मंडपम के बाहर से 18वें ब्रिक्स शिखर शिखर सम्मेलन के आगाज की तस्वीर


बेलारूस गणराज्य के विदेश मंत्री मैक्सिम रिजेंकोव ब्रिक्स शिखर शिखर सम्मेलन में शामिल होने लिए भारत पहुंचने पर हुआ स्वागत


ನವದೆಹಲಿ, 12 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಗೆ ನವದೆಹಲಿಯಲ್ಲಿ ಶನಿವಾರ ಅದ್ಧೂರಿ ಚಾಲನೆ ದೊರೆತಿದ್ದು, ಎರಡು ದಿನಗಳ ಶೃಂಗಸಭೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಚೀನಾದ ಅಧ್ಯಕ್ಷ ಶಿ ಜಿನ್‌ಪಿಂಗ್ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬೀಜಿಂಗ್‌ನಿಂದ ಭಾರತಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇದೇ ವೇಳೆ ಬೆಲಾರಸ್ ಗಣರಾಜ್ಯದ ವಿದೇಶಾಂಗ ಸಚಿವ ಮ್ಯಾಕ್ಸಿಮ್ ರಿಜೆಂಕೋವ್ ಕೂಡ ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ.

ಭಾರತದ ಆತಿಥ್ಯದಲ್ಲಿ ಸೆ.12 ಮತ್ತು 13ರಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಬ್ರಿಕ್ಸ್‌ನ ಸದಸ್ಯ ರಾಷ್ಟ್ರಗಳು, ಪಾಲುದಾರ ರಾಷ್ಟ್ರಗಳು ಹಾಗೂ ಹೊರ ಸಂಪರ್ಕ ಕಾರ್ಯಕ್ರಮಕ್ಕೆ ಆಹ್ವಾನಿತ ದೇಶಗಳ ನಾಯಕರು ಭಾಗವಹಿಸುತ್ತಿದ್ದಾರೆ. ಒಟ್ಟು 21 ದೇಶಗಳ ನಾಯಕರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಅವರ ಆಗಮನದ ಸರಣಿ ಮುಂದುವರಿದಿದೆ.

ಶೃಂಗಸಭೆಯ ಹಿನ್ನೆಲೆಯಲ್ಲಿ ನವದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಭಾರತ ಮಂಟಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸಲಾಗಿದೆ. ವಿಮಾನ ನಿಲ್ದಾಣದಿಂದ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ತ್ರಿವರ್ಣ ಬೆಳಕಿನಿಂದ ಅಲಂಕರಿಸಲಾಗಿದ್ದು, ರಾಜಧಾನಿ ಶೃಂಗಸಭೆಯ ಆತಿಥ್ಯಕ್ಕೆ ಸಜ್ಜುಗೊಂಡಿದೆ.

ಚೀನಾದ ‘ಗ್ಲೋಬಲ್ ಟೈಮ್ಸ್’ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಚೀನಾದ ಅಧ್ಯಕ್ಷ ಶಿ ಜಿನ್‌ಪಿಂಗ್ ಅವರು 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಬೀಜಿಂಗ್‌ನಿಂದ ಭಾರತಕ್ಕೆ ಪ್ರಯಾಣ ಬೆಳೆಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

45 ಸಾವಿರಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ

ಭದ್ರತಾ ವ್ಯವಸ್ಥೆಯ ಭಾಗವಾಗಿ ಸುಮಾರು 15 ಸಾವಿರ ದೆಹಲಿ ಪೊಲೀಸ್ ಸಿಬ್ಬಂದಿ ಹಾಗೂ ಅರೆಸೇನಾ ಪಡೆಗಳ 200 ತುಕಡಿಗಳನ್ನು ನಿಯೋಜಿಸಲಾಗಿದೆ. ಅರೆಸೇನಾ ಪಡೆಗಳಲ್ಲಿ ಒಟ್ಟು 30 ಸಾವಿರಕ್ಕೂ ಅಧಿಕ ಸಿಬ್ಬಂದಿ ಇರಲಿದ್ದು, ಪೊಲೀಸ್ ಹಾಗೂ ಅರೆಸೇನಾ ಪಡೆ ಸೇರಿದಂತೆ 45 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿ ರಾಜಧಾನಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಭಾರತ ಮಂಟಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರತಿಯೊಂದು ಚಟುವಟಿಕೆಯ ಮೇಲೂ ನಿಗಾ ಇರಿಸಲು 500ಕ್ಕೂ ಅಧಿಕ ಅತ್ಯಾಧುನಿಕ, ಉನ್ನತ ಸ್ಪಷ್ಟತೆಯ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಖ ಗುರುತಿಸುವಿಕೆ ಹಾಗೂ ವಾಹನಗಳ ನೋಂದಣಿ ಫಲಕ ಗುರುತಿಸುವ ವ್ಯವಸ್ಥೆಗಳನ್ನೂ ಬಳಸಲಾಗುತ್ತಿದೆ.

ವಿಶೇಷವಾಗಿ ಗಣ್ಯರು ಸಂಚರಿಸುವ ಮಾರ್ಗಗಳು, ವಿಮಾನ ನಿಲ್ದಾಣಗಳು ಹಾಗೂ ಗಣ್ಯರು ತಂಗುವ ಹೋಟೆಲ್‌ಗಳ ಭದ್ರತೆಗೆ ರಾಷ್ಟ್ರೀಯ ಭದ್ರತಾ ಪಡೆ ಕಮಾಂಡೋಗಳು, ಮಾನವರಹಿತ ವೈಮಾನಿಕ ಸಾಧನ ವಿರೋಧಿ ವ್ಯವಸ್ಥೆ, ತೀಕ್ಷ್ಣ ಶೂಟರ್‌ಗಳು ಹಾಗೂ ಸ್ಫೋಟಕ ತಪಾಸಣಾ ತಂಡಗಳನ್ನು ನಿಯೋಜಿಸಲಾಗಿದೆ.

21 ದೇಶಗಳ ನಾಯಕರು ಭಾಗಿ

18ನೇ ಬ್ರಿಕ್ಸ್ ಶೃಂಗಸಭೆಯ ಈ ವರ್ಷದ ಘೋಷವಾಕ್ಯ “ಸ್ಥಿತಿಸ್ಥಾಪಕತೆ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ನಿರ್ಮಾಣ” ಎಂಬುದಾಗಿದೆ.

ಬ್ರಿಕ್ಸ್‌ನ ಸಂಸ್ಥಾಪಕ ಸದಸ್ಯ ರಾಷ್ಟ್ರವಾಗಿರುವ ಭಾರತ ಈ ಹಿಂದೆ 2012, 2016 ಮತ್ತು 2021ರಲ್ಲಿ ಸಂಘಟನೆಯ ಅಧ್ಯಕ್ಷತೆಯನ್ನು ವಹಿಸಿತ್ತು. ಈ ಬಾರಿ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಶೃಂಗಸಭೆಗೆ 11 ಪೂರ್ಣ ಸದಸ್ಯ ರಾಷ್ಟ್ರಗಳು ಹಾಗೂ 10 ಪಾಲುದಾರ ರಾಷ್ಟ್ರಗಳು ಸೇರಿದಂತೆ ಒಟ್ಟು 21 ದೇಶಗಳ ನಾಯಕರು ಭಾಗವಹಿಸುತ್ತಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande