ಬಾಯಲ್ಲಿ ಸಾಮಾಜಿಕ ನ್ಯಾಯ, ಕೃತಿಯಲ್ಲಿ ಅನ್ಯಾಯ; ಸತೀಶ್ ಜಾರಕಿಹೊಳಿ ವಿರುದ್ಧ ಸಿ.ಟಿ. ರವಿ ವಾಗ್ದಾಳಿ
ಬೆಂಗಳೂರು, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕರ್ನಾಟಕದಲ್ಲಿ ಭಾರಿ ಲಂಚ ಸ್ವೀಕರಿಸಿ, ಆ ಹಣದಲ್ಲಿ ಮಕ್ಕಳ ಹೆಸರಿನಲ್ಲಿ ಆಫ್ರಿಕಾದಲ್ಲಿ ಗಣಿ ಖರೀದಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ
ಸಿ.ಟಿ.ರವಿ


ಬೆಂಗಳೂರು, 12 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಕರ್ನಾಟಕದಲ್ಲಿ ಭಾರಿ ಲಂಚ ಸ್ವೀಕರಿಸಿ, ಆ ಹಣದಲ್ಲಿ ಮಕ್ಕಳ ಹೆಸರಿನಲ್ಲಿ ಆಫ್ರಿಕಾದಲ್ಲಿ ಗಣಿ ಖರೀದಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಹೇಳಿಕೆ ನೀಡಿರುವ ಸಿ.ಟಿ. ರವಿ, ‘ಬಾಯಲ್ಲಿ ಸಾಮಾಜಿಕ ನ್ಯಾಯ, ಕೃತಿಯಲ್ಲಿ ಅನ್ಯಾಯ’ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವನ್ನೇ ತನ್ನ ಮೊದಲ ಆದ್ಯತೆಯನ್ನಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯದಲ್ಲಿ ಗುತ್ತಿಗೆದಾರರಿಂದ ಪಡೆದಿದ್ದಾರೆ ಎನ್ನಲಾದ ಲಂಚದ ಹಣದಲ್ಲಿ ಕಾಂಗೋ ದೇಶದ ಚಿನ್ನದ ಗಣಿಯಲ್ಲಿ ಶೇ.40ರಷ್ಟು ಮಾಲೀಕತ್ವ ಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಜಾರಿ ನಿರ್ದೇಶನಾಲಯದ ತನಿಖೆಯು ಕಾಂಗ್ರೆಸ್ ನಾಯಕರ ನೈಜ ‘ಸಾಮಾಜಿಕ ನ್ಯಾಯ’ಕ್ಕೆ ಕನ್ನಡಿ ಹಿಡಿದಿದೆ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಮಾತನಾಡಿರುವ ಸಿ.ಟಿ. ರವಿ, ವೇದಿಕೆಗಳಲ್ಲಿ ಯಾರಾದರೂ 10 ರೂಪಾಯಿ ಲಂಚ ಕೇಳಿದರೂ ತಮ್ಮ ಗಮನಕ್ಕೆ ತರುವಂತೆ ಹೇಳುತ್ತಿದ್ದಿರಿ. ಆದರೆ ಇದೀಗ ನಿಮ್ಮ ಸಚಿವ ಸಂಪುಟದ ಸಹೋದ್ಯೋಗಿಯೊಬ್ಬರು 10 ರೂಪಾಯಿ ಅಲ್ಲ, ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ತಾವು ನುಡಿದಂತೆ ನಡೆಯುವವರಾಗಿದ್ದರೆ, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸತೀಶ್ ಜಾರಕಿಹೊಳಿ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಸಿ.ಟಿ. ರವಿ ಆಗ್ರಹಿಸಿದ್ದಾರೆ. ಅಲ್ಲದೆ, ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇಲ್ಲವಾದರೆ, ತಮ್ಮ ಸಚಿವರ ವಿರುದ್ಧದ ಆರೋಪಗಳಿಗೆ ಮುಖ್ಯಮಂತ್ರಿಯವರ ಬೆಂಬಲವೂ ಇದೆ ಎಂದು ರಾಜ್ಯದ ಜನರು ಭಾವಿಸಬೇಕಾಗುತ್ತದೆ ಎಂದು ಸಿ.ಟಿ. ರವಿ ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande