
ಡೋಡಾ, 12 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಜಮ್ಮು-ಕಾಶ್ಮೀರದ ಡೋಡಾ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ನಿಷೇಧಿತ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಎನ್ನಲಾದ ಶಂಕಿತ ಪಾಕಿಸ್ತಾನಿ ಉಗ್ರನ ಮೃತದೇಹ ಪತ್ತೆಯಾಗಿದೆ.
ಭದ್ರತಾ ಪಡೆಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಡೋಡಾದ ಭದ್ರವಾಹ್ ಕಣಿವೆಯನ್ನು ನೆರೆಯ ಉಧಂಪುರ ಮತ್ತು ಕಥುವಾ ಜಿಲ್ಲೆಗಳೊಂದಿಗೆ ಸಂಪರ್ಕಿಸುವ ದೂರದ ಸಿಯೋಜಧಾರ್ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡೋಡಾ ವಿಶೇಷ ಕಾರ್ಯಾಚರಣೆ ಪಡೆ, ಸೇನೆಯ ರಾಷ್ಟ್ರೀಯ ರೈಫಲ್ಸ್ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಈ ಹಿಂದೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತ ಉಗ್ರನನ್ನು ಹತ್ಯೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹದ ಸಮೀಪ ರಾತ್ರಿ ವೇಳೆಯೂ ದಾಳಿ ನಡೆಸಲು ಸಾಧ್ಯವಾಗುವ ಎಂ-4 ರೈಫಲ್ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.