
ನವದೆಹಲಿ, 12 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತ ಪ್ರವಾಸದಲ್ಲಿರುವ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರು ಶನಿವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ–ಇರಾನ್ ದ್ವಿಪಕ್ಷೀಯ ಸಂಬಂಧಗಳಿಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಇದಕ್ಕೂ ಮುನ್ನ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಪೆಜೆಶ್ಕಿಯನ್ ಅವರನ್ನು ಭೇಟಿಯಾಗಿದ್ದರು. ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಆಯಾಮಗಳ ಕುರಿತು ಮಾತುಕತೆ ನಡೆಸಿದ್ದರು.
ಇದೇ ವೇಳೆ, ಇರಾನ್ ಅಧ್ಯಕ್ಷರ ಪುತ್ರಿ ಜಹ್ರಾ ಪೆಜೆಶ್ಕಿಯನ್ ಅವರು ತಮ್ಮ ಪತಿ ಹಸನ್ ಮಜೀದಿ ಅವರೊಂದಿಗೆ ನವದೆಹಲಿಯ ರಾಷ್ಟ್ರೀಯ ಕರಕುಶಲ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿ ಬ್ರಿಕ್ಸ್ ಮಾರುಕಟ್ಟೆಯನ್ನು ವೀಕ್ಷಿಸಿದರು. ಬ್ರಿಕ್ಸ್ ಸದಸ್ಯ ಹಾಗೂ ಪಾಲುದಾರ ರಾಷ್ಟ್ರಗಳ ಕಲೆ, ಕರಕುಶಲ ವಸ್ತುಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲಾಗಿದ್ದ ವಿವಿಧ ವಸ್ತುಗಳನ್ನು ಅವರು ವೀಕ್ಷಿಸಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.