
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಭಾರತ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ‘ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ' ಜಂಟಿಯಾಗಿ ರಾಜ್ಯದ ಯುವಜನರಲ್ಲಿರುವ ವೃತ್ತಿಪರ ಕೌಶಲ್ಯಗಳನ್ನು ಪ್ರದರ್ಶಿಸಲು ‘ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ 2026-27’ ಅನ್ನು ಆಯೋಜಿಸುತ್ತಿವೆ.
ಈ ಸ್ಪರ್ಧೆಯು ಜಿಲ್ಲಾ, ವಲಯ ಮತ್ತು ರಾಜ್ಯ ಮಟ್ಟಗಳಲ್ಲಿ ನಡೆಯಲಿದ್ದು, ಯುವಜನರಿಗೆ ಸೂಕ್ತ ತರಬೇತಿ, ಮಾರ್ಗದರ್ಶನ ಹಾಗೂ ರಾಷ್ಟಿçÃಯ-ಅಂತರಾಷ್ಟಿçÃಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಅಪೂರ್ವ ಅವಕಾಶ ಕಲ್ಪಿಸಲಿದೆ.
*ಜಾಗತಿಕ ವೇದಿಕೆಯಲ್ಲಿ ಕರ್ನಾಟಕದ ಹೆಜ್ಜೆ ಗುರುತು*:
2026ರ ಸೆಪ್ಟೆಂಬರ್ನಲ್ಲಿ ಚೀನಾದ ಶಾಂಫೈನಲ್ಲಿ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದಿಂದ 16 ಅಭ್ಯರ್ಥಿಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.
ಮುಂಬರುವ 2028ರ ವಿಶ್ವ ಕೌಶಲ್ಯ ಸ್ಪರ್ಧೆಯು ಜಪಾನ್ ದೇಶದ ಐಚಿ ಯಲ್ಲಿ ನಡೆಯಲಿದ್ದು, ಅದಕ್ಕಾಗಿ ಈಗಿನಿಂದಲೇ ರಾಜ್ಯದ ಪ್ರತಿಭಾವಂತ ಯುವಜನರನ್ನು ಸಜ್ಜುಗೊಳಿಸಲು ಕೌಶಲ್ಯ ಒಲಂಪಿಕ್ಸ್ ಯೋಜಿಸಲಾಗಿದೆ.
ವಿವಿಧ ಕಾಲೇಜುಗಳು, ತಾಂತ್ರಿಕ ಹಾಗೂ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು/ಯುವಜನರು ಭಾಗವಹಿಸಬಹುದಾಗಿದೆ.
ಅಸಕ್ತ ಅಭ್ಯರ್ಥಿಗಳು ‘ಸ್ಕಿಲ್ ಇಂಡಿಯಾ ಡಿಜಿಟಲ್ ಹಬ್' ವೆಬ್ಸೈಟ್ www.skillindiadigital.gov.in ಮೂಲಕ ಸೆಪ್ಟೆಂಬರ್ 15 ರ ಒಳಗಾಗಿ ನೋಂದಾಯಿಸಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಣೇಶ್, ಉಪ ಪ್ರಧಾನ ವ್ಯವಸ್ಥಾಪಕರು, ಕೆ.ಎಸ್.ಡಿ.ಸಿ, ಬೆಂಗಳೂರು, ಮೊಬೈಲ್ ದೂರವಾಣಿ ಸಂಖ್ಯೆ 9686409096 ಗೆ ಸಂಪರ್ಕಿಸುವ0ತೆ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಬೋಧ್ ಯಾದವ್ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್