ವಿದ್ಯಾರ್ಥಿಗಳಲ್ಲಿ ನೈತಿಕತೆ ಬೆಳೆಸಲು ವಿಧಾನಪರಿಷತ ಸದಸ್ಯ ಅನಿಲ್ ಕುಮಾರ್ ಕರೆ
ವಿದ್ಯಾರ್ಥಿಗಳಲ್ಲಿ ನೈತಿಕತೆಯನ್ನು ಬೆಳಿಸಲು ವಿಧಾನಪರಿಷತ ಸದಸ್ಯ ಎಂ.ಎಲ್.ಸಿ ಅನಿಲ್ ಕುಮಾರ್ ಕರೆ
ಕೋಲಾರದಲ್ಲಿ ಶನಿವಾರ ನಡೆದ ಕರ್ನಾಟಕ ಜ್ಞಾನ ವಿಜ್ಞಾನ ಜಿಲ್ಲಾ ಸಮಿತಿ ಏರ್ಪಡಿಸಿದ್ದ ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು


ಕೋಲಾರ,12 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಇಂದಿನ ವೈಜ್ಞಾನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಬೆಳಸುವ ಮತ್ತು ನೈತಿಕ ಶಿಕ್ಷಣದ ಅಗತ್ಯವಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸೇವಾ ಮನೋಭಾವದಿಂದ ದುಡಿದು ವಿದ್ಯಾರ್ಥಿಗಳನ್ನು ಶಿಲ್ಪಿಗಳನ್ನಾಗಿ ತಯಾರು ಮಾಡಬೇಕೆಂದು ವಿಧಾನ ಪರಿಷತ್ತಿನ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಶನಿವಾರ ಕರ್ನಾಟಕ ಜ್ಞಾನ ವಿಜ್ಞಾನ ಜಿಲ್ಲಾ ಸಮಿತಿ ಏರ್ಪಡಿಸಿದ್ದ ರಸಪ್ರಶ್ನೆ ವಿಜೇತರಿಗೆ ಸನ್ಮಾನಿಸಿ ಮಾತನಾಡಿದರು. ಪ್ರತಿಭೆ ಯಾರ ಆಸ್ತಿಯೂ ಅಲ್ಲ.ಅದು ತನ್ನಿಂದತಾನೇ ಮೂಡುವಂತಹದ್ದು,ಸತತ ಪರಿಶ್ರಮ ಮತ್ತು ಶ್ರದ್ದೆಯಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶಸ್ತಿ,ಪುರಸ್ಕಾರ ಪಡೆಯಲು ಸಾದ್ಯ. ಈ ದೆಸೆಯಲ್ಲಿ ಕರ್ನಾಟಕದಲ್ಲಿ ಕೋಲಾರ ಜಿಲ್ಲೆಗೆ ವಿಶೇಷ ಸ್ಥಾನವಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜಾತ್ಯಾತೀತ ಜನತಾದಳದ ತಾಲ್ಲೂಕು ಅಧ್ಯಕ್ಷ ಬಾಬು ಮೌನಿ ಮಾತನಾಡಿ ಕಲಿಯುವ ಹಂತದಲ್ಲಿ ವಿದ್ಯಾರ್ಥಿಗಳು ಕೇವಲ ಪುಸ್ತಕದಲ್ಲಿ ಮಾತ್ರ ಸೀಮಿತರಾಗದೇ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇಯಾದ ಕಲಿಕೆ ಮತ್ತು ನಿರಂತರ ಅಭ್ಯಾಸ ಮೂಡಿಸಿದಾಗ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದರು.

ಕೋಲಾರ ತಾಲ್ಲೂಕು ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಮ್.ರಾದಮ್ಮ ಮಾತನಾಡಿ ವಿದ್ಯಾರ್ಥಿಗಳು ಯಾವ ಕ್ಷೇತ್ರದಲ್ಲಿ ಕಲಿಕೆಯ ಆಸಕ್ತಿ ಹೊಂದಿರುತ್ತಾರೋ ಅಲ್ಲಿ ಅವರ ಜ್ಞಾನಕದ ಕಲಿಕೆಗೆ ಹೆಚ್ಚು ಅವಕಾಶಗಳನ್ನು ಪೋಷಕರು ಕಲ್ಪಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಶಿಕ್ಷಕರು ಮತ್ತು ಪೋಷಕರ ಪರಿಶ್ರಮ ಶ್ಲಾಘನೀಯವಾಗಿದ್ದು, ಸ್ಫರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿ ದೆಸೆಯಲ್ಲಿ ರಸಪ್ರಶ್ನೆಗಳು ಪೂರಕವಾಗಿ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ಕೆ.ಡಿ.ಪಿ ಸದಸ್ಯ ರಾಜಕುಮಾರ್,ಲೋಕೇಶ್, ಶ್ರೀನಿವಾಸ್ ಯಾದವ್,ಕೆ.ಶ್ರೀನಿವಾಸ್, ಮುಖಂಡರುಗಳಾದ ಶರಣಪ್ಪ ಜಮಾದಾರ,ಕೆ.ವಿ ಜಗನ್ನಾಥ, ಮಂಜುಳಾ ವೈ, ಶರಣಪ್ಪ ಗಬ್ಬೂರು,ಪಿ.ವಿ ಗೋಪಿನಾಥ, ಮಂಜುನಾಥ್, ಲಕ್ಷ್ಮೀ ಭಟ್, ಸೌಮ್ಯ ಎಲ್ಲಾ ತಾಲ್ಲೂಕು ಅಧ್ಯಕ್ಷರುಗಳು, ವಿವಿಧ ಶಾಲೆಯ ಮಾರ್ಗದರ್ಶಿ ಶಿಕ್ಷಕರು,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande