ಅಂತರ್ಗತ ಜಾಗತಿಕ ಆಡಳಿತಕ್ಕೆ ಪ್ರಧಾನಿ ಮೋದಿ ಒತ್ತು
ನವದೆಹಲಿ, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಾಗತಿಕ ದಕ್ಷಿಣ ರಾಷ್ಟ್ರಗಳಿಗೆ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ಮೂಲಕ ಜಾಗತಿಕ ಆಡಳಿತ ವ್ಯವಸ್ಥೆಯನ್ನು ಇಂದಿನ ವಾಸ್ತವತೆಗೆ ಅನುಗುಣವಾಗಿ ರೂಪಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರ
नई दिल्ली में 18वें ब्रिक्स शिखर सम्मेलन के दौरान ‘समावेशी वैश्विक शासन और बहुपक्षवाद को मजबूत करना’ विषयक सत्र की अध्यक्षता करते प्रधानमंत्री नरेन्द्र मोदी।


ನವದೆಹಲಿ, 13 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಜಾಗತಿಕ ದಕ್ಷಿಣ ರಾಷ್ಟ್ರಗಳಿಗೆ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ಮೂಲಕ ಜಾಗತಿಕ ಆಡಳಿತ ವ್ಯವಸ್ಥೆಯನ್ನು ಇಂದಿನ ವಾಸ್ತವತೆಗೆ ಅನುಗುಣವಾಗಿ ರೂಪಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಸೆ.12ರಂದು ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ‘ಸಮಾವೇಶಿತ ಜಾಗತಿಕ ಆಡಳಿತ ಮತ್ತು ಬಹುಪಕ್ಷೀಯ ವ್ಯವಸ್ಥೆಯನ್ನು ಬಲಪಡಿಸುವುದು’ ಎಂಬ ವಿಷಯದ ಅಧಿವೇಶನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಗತ್ತಿನಲ್ಲಿ ಉಂಟಾಗುತ್ತಿರುವ ಬಿಕ್ಕಟ್ಟುಗಳ ಮುಂಚೂಣಿಯಲ್ಲಿ ಜಾಗತಿಕ ದಕ್ಷಿಣ ರಾಷ್ಟ್ರಗಳಿದ್ದರೂ, ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಅವು ಹಿಂದುಳಿದಿವೆ ಎಂದು ಹೇಳಿದರು.

ಪ್ರಸ್ತುತ ಜಾಗತಿಕ ವಾಸ್ತವತೆಗಳಿಗೆ ಅನುಗುಣವಾಗಿ ಜಾಗತಿಕ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು. ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವುದು ಅಗತ್ಯ ಎಂದು ಪ್ರಧಾನಿ ಮೋದಿ ಹೇಳಿದರು.

ನಿಯಮ ಪಾಲಿಸುವವರಷ್ಟೇ ಅಲ್ಲ, ನಿಯಮ ರೂಪಿಸುವವರಾಗಬೇಕು

ಜಾಗತಿಕ ದಕ್ಷಿಣ ರಾಷ್ಟ್ರಗಳು ಕೇವಲ ನಿಯಮಗಳನ್ನು ಪಾಲಿಸುವವರಾಗಿರದೆ, ನಿಯಮಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವಂತಾಗಬೇಕು ಎಂದು ಪ್ರಧಾನಿ ಹೇಳಿದರು. ವಿಶೇಷವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಂತಹ ಪ್ರಮುಖ ಸಂಸ್ಥೆಗಳಲ್ಲಿ ಜಾಗತಿಕ ದಕ್ಷಿಣದ ಪ್ರಾತಿನಿಧ್ಯವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

ಬ್ರಿಕ್ಸ್ ವೇದಿಕೆಯ ಮೂಲಕ ಜಾಗತಿಕ ದಕ್ಷಿಣದ ಯುವ ರಾಜತಾಂತ್ರಿಕರು ಹಾಗೂ ನೀತಿ ನಿರೂಪಕರಿಗೆ ಸಂವಾದ ಕೌಶಲ್ಯ, ಪ್ರಾಯೋಗಿಕ ತರಬೇತಿ ಮತ್ತು ಕಾನೂನು ಪರಿಣತಿಯನ್ನು ಒದಗಿಸಬಹುದು ಎಂದು ಪ್ರಧಾನಿ ಸಲಹೆ ನೀಡಿದರು.

ನಾವಿಕರಿಗೆ ತುರ್ತು ನೆರವು ಜಾಲ

ಸಮುದ್ರ ವ್ಯಾಪಾರದಲ್ಲಿ ನಾವಿಕರು ವಹಿಸುವ ಮಹತ್ವದ ಪಾತ್ರವನ್ನೂ ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ಜಾಗತಿಕ ವ್ಯಾಪಾರದಲ್ಲಿ ನಾವಿಕರು ಪ್ರಮುಖ ಕೊಡುಗೆ ನೀಡುತ್ತಿದ್ದರೂ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ಅವರಿಗೆ ಅಗತ್ಯ ಪ್ರಮಾಣದ ನೆರವು ದೊರೆಯುವುದಿಲ್ಲ ಎಂದು ಅವರು ಹೇಳಿದರು.

ನಾವಿಕರಿಗೆ ಸಂಕಷ್ಟದ ಸಂದರ್ಭದಲ್ಲಿ ನೆರವು ಒದಗಿಸಲು ‘ನಾವಿಕರ ತುರ್ತು ನೆರವು ಜಾಲ’ ಸ್ಥಾಪಿಸುವಂತೆ ಅವರು ಪ್ರಸ್ತಾಪಿಸಿದರು.

ಭವಿಷ್ಯ ಎಲ್ಲರಿಗೂ ಸೇರಿದ್ದಾಗಿದೆ. ಆದ್ದರಿಂದ ಆ ಭವಿಷ್ಯವನ್ನು ರೂಪಿಸುವ ಹಕ್ಕು ಕೂಡ ಎಲ್ಲರಿಗೂ ಸಮಾನವಾಗಿ ಇರಬೇಕು ಎಂದು ಪ್ರಧಾನಿ ಹೇಳಿದರು. ಜಾಗತಿಕ ವ್ಯವಸ್ಥೆಯಲ್ಲಿ ಕೇವಲ ಧ್ವನಿ ಹೊಂದಿರುವುದರಿಂದ ಮುಂದೆ ಸಾಗದೆ, ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಮತ್ತು ವಿಶೇಷಾಧಿಕಾರಗಳನ್ನು ಹಂಚಿಕೊಳ್ಳುವ ಸಹಭಾಗಿತ್ವದತ್ತ ಸಾಗಬೇಕಿದೆ ಎಂದು ಅವರು ಒತ್ತಿ ಹೇಳಿದರು.

ಅಧಿವೇಶನದ ಸಮಾರೋಪದಲ್ಲಿ ನವದೆಹಲಿ ಬ್ರಿಕ್ಸ್ ನಾಯಕರ ಘೋಷಣೆಯನ್ನು ಅಂಗೀಕರಿಸಲಾಯಿತು. ಬ್ರಿಕ್ಸ್ ಸಹಕಾರಕ್ಕೆ ಸಂಬಂಧಿಸಿದ ಸಾಮಾನ್ಯ ಆದ್ಯತೆಗಳು, ಬದ್ಧತೆಗಳು ಹಾಗೂ ಮುಂದಿನ ಕಾರ್ಯದಿಕ್ಕನ್ನು ಈ ಘೋಷಣೆ ವಿವರಿಸಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande