ಗೋನೂರು ತಲುಪಿದ ಭದ್ರೆ: ಸೆ.24ರಂದು ಸಿಎಂರಿಂದ ಗಂಗಾಪೂಜೆ
ಸೆ.24ರಂದು ಸಿಎಂರಿಂದ ಗಂಗಾಪೂಜೆ
Bhadra Upper Project Water Reaches Gonuru, CM DK Shivakumar to Perform Ganga Puja on Sept 24


ಚಿತ್ರದುರ್ಗ, 13 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಭದ್ರಾ ಮೇಲ್ದಂಡೆ ಯೋಜನೆಯ ನೀರು ಗೋನೂರು ಕೆರೆಗೆ ತಲುಪಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗೋನೂರು ಕೆರೆಯಲ್ಲಿ ಗಂಗಾಪೂಜೆ ನೆರವೇರಿಸಲಿದ್ದಾರೆ.

ಬಳಿಕ ಚಿತ್ರದುರ್ಗ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ತಿಳಿಸಿದರು.

ಬಹುದಿನಗಳ ಬೇಡಿಕೆಯಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ ಪೂರಕವಾಗಿ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ. ವೈ-ಜಂಕ್ಷನ್ನಿಂದ 114 ಕಿ.ಮೀ ಉದ್ದದ ಕಾಲುವೆಗೆ 3 ಟಿಎಂಸಿ ನೀರು ಹರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದು, ಈಗಾಗಲೇ ನೀರು ಗೋನೂರು ಕೆರೆಗೆ ತಲುಪಿದೆ ಎಂದು ಸಚಿವರು ವಿವರಿಸಿದರು.

ಯೋಜನೆಯಡಿ ಹಿರಿಯೂರು, ಹೊಸದುರ್ಗ, ಚಿತ್ರದುರ್ಗ, ಚಳ್ಳಕೆರೆ, ಕಡೂರು ಹಾಗೂ ತರೀಕೆರೆ ತಾಲೂಕುಗಳ ಸುಮಾರು 80 ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಭರದಿಂದ ಸಾಗಿದೆ. ಭದ್ರಾ ಮೇಲ್ದಂಡೆ ಯೋಜನೆ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ.

ಈ ಯೋಜನೆ ಸಾಕಾರಗೊಳ್ಳಲು ಹಲವು ಹಂತಗಳಲ್ಲಿ ವಿವಿಧ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ಕೊಡುಗೆ ಇದೆ ಎಂದು ರಘುಮೂರ್ತಿ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande