
ಹುಬ್ಬಳ್ಳಿ, 13 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ನಗರದ ಮರಾಠ ಗಲ್ಲಿಯಿಂದ ಸಿಬಿಟಿ ಕಡೆಗೆ ತೆರಳುವ ರಸ್ತೆಯ ಬಳಿ ಸೆ.12ರಂದು ರಾತ್ರಿ 9.30ರ ಸುಮಾರಿಗೆ ಮೇದಾರ್ ಓಣಿ ಹಾಗೂ ಕಲಾಲ್ ಓಣಿಯ ಗಣಪತಿ ಮೆರವಣಿಗೆಗಳು ಮುಖಾಮುಖಿಯಾದವು.
ಈ ವೇಳೆ ಕಲಾಲ್ ಓಣಿಯ ಗಣಪತಿ ಮೆರವಣಿಗೆಯಲ್ಲಿನ ಡಿಜೆ ವಾಹನದ ಮುಂದೆ ಕೆಲವು ಯುವಕರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ, 30 ಸೆಕೆಂಡ್‌ಗಳಿಗಿಂತ ಕಡಿಮೆ ಅವಧಿಯಲ್ಲಿ ಕನಿಷ್ಠ ಬಲಪ್ರಯೋಗದ ಮೂಲಕ ಯುವಕರನ್ನು ಅಲ್ಲಿಂದ ಚದುರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಅವಳಿ ನಗರ ಪೋಲಿಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.