
ಬೆಂಗಳೂರು, 13 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಗಣೇಶ ಚತುರ್ಥಿ ಆಚರಣೆಗೆ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಹಾಗೂ ನಿಯಮಗಳನ್ನು ಸರಳಗೊಳಿಸುವಂತೆ ಆಗ್ರಹಿಸಿ ಶಾಸಕ ಸಿ.ಕೆ. ರಾಮಮೂರ್ತಿ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಗಣೇಶೋತ್ಸವವನ್ನು ಸಾರ್ವಜನಿಕರು ಹಾಗೂ ಸಂಘ–ಸಂಸ್ಥೆಗಳು ಸಾಂಪ್ರದಾಯಿಕವಾಗಿ ಆಚರಿಸುತ್ತಿದ್ದು, ಪ್ರಸ್ತುತ ಇರುವ ಕೆಲವು ನಿಯಮಗಳಿಂದ ಆಚರಣಾ ಸಮಿತಿಗಳಿಗೆ ತೊಂದರೆಯಾಗುತ್ತಿದೆ.
ಹೀಗಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆಗೆ ಸಂಬಂಧಿಸಿದ ನಿಯಮಗಳನ್ನು ಸರಳಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಗಣೇಶೋತ್ಸವ ಆಯೋಜಕರಿಗೆ ಅನಗತ್ಯ ತೊಂದರೆ ಆಗದಂತೆ ಪೊಲೀಸ್ ಇಲಾಖೆಗೆ ಸೂಕ್ತ ಸೂಚನೆ ನೀಡಬೇಕು.
ಹಬ್ಬದ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಭಕ್ತರು ಹಾಗೂ ಸಾರ್ವಜನಿಕರು ಮುಕ್ತವಾಗಿ ಹಬ್ಬ ಆಚರಿಸಲು ಅನುಕೂಲ ಮಾಡಿಕೊಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಶಾಸಕರ ಮನವಿಯನ್ನು ಪರಿಗಣಿಸಿ ಗಣೇಶೋತ್ಸವದ ಮಾರ್ಗಸೂಚಿಗಳನ್ನು ಸರಳಗೊಳಿಸುವ ಕುರಿತು ಸರ್ಕಾರ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R