
ಬೆಂಗಳೂರು, 13 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ರಾಜ್ಯದಲ್ಲಿ ಅಂತರ್ಜಲ ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ 14.18 ಲಕ್ಷ ಅಂತರ್ಜಲ ಯೋಜನೆಗಳು ದಾಖಲಾಗಿದ್ದು,
38,960 ಜಲಮೂಲಗಳ ಗಣತಿ ಕಾರ್ಯ ಪೂರ್ಣಗೊಂಡಿದೆ ಎಂದು ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಲದ ಸ್ಥಿತಿ, ಲಭ್ಯತೆ ಹಾಗೂ ಬಳಕೆಯ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಜಲಮೂಲಗಳ ಗಣತಿ ನಡೆಸಲಾಗುತ್ತಿದೆ.
ಗಣತಿಯಿಂದ ಲಭ್ಯವಾಗುವ ದತ್ತಾಂಶವನ್ನು ಅಂತರ್ಜಲ ಸಂಪನ್ಮೂಲಗಳ ಯೋಜನೆ ಮತ್ತು ಬರ ನಿರ್ವಹಣೆಗೆ ಬಳಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಅಂತರ್ಜಲದ ಲಭ್ಯತೆ ಮತ್ತು ಬಳಕೆಯ ಕುರಿತು ನಿಖರ ಮಾಹಿತಿ ಹೊಂದಿರುವುದು ಭವಿಷ್ಯದಲ್ಲಿ ನೀರಿನ ಕೊರತೆ ಎದುರಾಗುವ ಪ್ರದೇಶಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಹಕಾರಿಯಾಗಲಿದೆ.
ಜಲಮೂಲಗಳ ಸ್ಥಿತಿ, ಬಳಕೆ ಹಾಗೂ ಲಭ್ಯತೆಯ ಮಾಹಿತಿಯನ್ನು ಆಧರಿಸಿ ಅಗತ್ಯ ಯೋಜನೆಗಳನ್ನು ರೂಪಿಸಲು ಸರ್ಕಾರ ಮುಂದಾಗಲಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಅಂತರ್ಜಲ ಸಂರಕ್ಷಣೆ ಹಾಗೂ ಸಮರ್ಪಕ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಗಣತಿ ದತ್ತಾಂಶವು ನೀರಿನ ನಿರ್ವಹಣೆಗೆ ಪ್ರಮುಖ ಆಧಾರವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R