
ಬೆಂಗಳೂರು, 13 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದಕ್ಕೂ ಸರ್ಕಾರದ ಅನುಮತಿ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಸರ್ಕಾರ ವಿಧಿಸಿರುವ ನಿಯಮಗಳು ಹಾಗೂ ನಿರ್ಬಂಧಗಳನ್ನು ಪ್ರಶ್ನಿಸಿದ ಅವರು, ಧಾರ್ಮಿಕ ಆಚರಣೆಗಳಿಗೆ ಅನಗತ್ಯವಾಗಿ ಅಡ್ಡಿಪಡಿಸಲಾಗುತ್ತಿದೆ ಎಂದು ಆರೋಪಿಸಿದರು.
“ಮನೆಯಲ್ಲೇ ಗಣಪತಿ ಇಡೋಕೂ ಪರ್ಮಿಷನ್ ಪಡೆಯಬೇಕಾಗುತ್ತೆ. ಹಬ್ಬ ಆಚರಿಸುವುದಕ್ಕೂ ಸರ್ಕಾರದ ಅನುಮತಿ ಪಡೆಯಬೇಕಾದ ಪರಿಸ್ಥಿತಿ ಬಂದಿದೆ. ಸರ್ಕಾರದ ಈ ರೀತಿಯ ನಿಯಮಗಳಿಂದ ಜನರಿಗೆ ತೊಂದರೆಯಾಗುತ್ತಿದೆ,” ಎಂದು ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕವಾಗಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಗಳಿಗೆ ಸಂಬಂಧಿಸಿದಂತೆ ಪೊಲೀಸ್ ಹಾಗೂ ಸ್ಥಳೀಯ ಆಡಳಿತದ ಅನುಮತಿ ಸೇರಿದಂತೆ ಹಲವು ನಿಯಮಗಳು ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಅಶೋಕ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R