ಗಣೇಶ ಬಿಜೆಪಿಯ ಆಸ್ತಿಯಲ್ಲ: ಡಿ.ಕೆ. ಶಿವಕುಮಾರ್
ಗಣೇಶ ಬಿಜೆಪಿಯ ಆಸ್ತಿಯಲ್ಲ
ಗಣೇಶ ಬಿಜೆಪಿಯ ಆಸ್ತಿಯಲ್ಲ: ಡಿ.ಕೆ. ಶಿವಕುಮಾರ್


ಬೆಂಗಳೂರು, 13 ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ಗಣೇಶೋತ್ಸವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಗಣೇಶ ಯಾರೊಬ್ಬರ ಆಸ್ತಿಯೂ ಅಲ್ಲ, ಎಲ್ಲರೂ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಅವರು ಹೇಳಿದ್ದಾರೆ.

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ನಿಯಮಗಳನ್ನು ಪಾಲಿಸುವುದು ಅಗತ್ಯ.

ವಿದ್ಯುತ್ ಕಂಬ, ತಂತಿ, ಶಿಸ್ತು ಹಾಗೂ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದ ಕ್ರಮಗಳನ್ನು ಪೂರ್ಣಗೊಳಿಸಿ ಗಣೇಶೋತ್ಸವ ಆಚರಿಸಬೇಕು ಎಂದು ಸೂಚಿಸಿದರು.

“ಗಣೇಶ ಬಿಜೆಪಿಯ ಆಸ್ತಿಯಲ್ಲ. ಗಣೇಶೋತ್ಸವವನ್ನು ನೆಪ ಮಾಡಿಕೊಂಡು ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ದೊಡ್ಡ ಮಟ್ಟದ ಕುತಂತ್ರ ನಡೆಯುತ್ತಿರುವುದು ನಮ್ಮ ಗಮನಕ್ಕೂ ಬಂದಿದೆ.

ಹೀಗಾಗಿ ಪೊಲೀಸರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇವೆ. ಯಾರನ್ನೂ ಬೆದರಿಸುವ ಉದ್ದೇಶ ಸರ್ಕಾರಕ್ಕಿಲ್ಲ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ ಗಣೇಶೋತ್ಸವವನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸುವಂತೆ ಅವರು ಮನವಿ ಮಾಡಿದರು.

ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ಮುಂದುವರಿದಿರುವ ಸಂದರ್ಭದಲ್ಲೇ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande