ಖಾಸಗಿ ಶಾಲಾ ಶಿಕ್ಷಕರಿಗೂ ಆರೋಗ್ಯ ವಿಮೆ: ಮಧು ಬಂಗಾರಪ್ಪ
ಮಧು ಬಂಗಾರಪ್ಪ
ಖಾಸಗಿ ಶಾಲಾ ಶಿಕ್ಷಕರಿಗೂ ಆರೋಗ್ಯ ವಿಮೆ: ಮಧು ಬಂಗಾರಪ್ಪ


ಬೆಂಗಳೂರು, 13 ಸೆಪ್ಟೆಂಬರ್(ಹಿ.ಸ.)ಆ್ಯಂಕರ್:

ರಾಜ್ಯದ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಖಾಸಗಿ ಶಾಲಾ ಶಿಕ್ಷಕರು ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಅವರ ಆರೋಗ್ಯ ಮತ್ತು ಕಲ್ಯಾಣದ ದೃಷ್ಟಿಯಿಂದ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಮಾದರಿಯಲ್ಲಿ ಖಾಸಗಿ ಶಾಲಾ ಶಿಕ್ಷಕರಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

ಶಿಕ್ಷಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಶಾಲಾ ಶಿಕ್ಷಕರಿಗೆ ಆರೋಗ್ಯ ವಿಮೆ ಕಲ್ಪಿಸುವ ಕ್ರಮ ಜಾರಿಗೆ ಬಂದರೆ, ರಾಜ್ಯದ ಸಾವಿರಾರು ಶಿಕ್ಷಕರು ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗಲಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande