ಕನ್ನಾಘಟ್ಟ ಮಹಾಗಣಪತಿ ದೇವಸ್ಥಾನ ಲೋಕಾರ್ಪಣೆ
ದೇವಸ್ಥಾನ ಲೋಕಾರ್ಪಣೆ
kannaghatta-maha-ganapathi-temple-inaugurated-minister-n-chaluvarayaswamy-says-congress-will-return-to-power-in-2028-dk-shivakumar-to-become-cm-again


ನಾಗಮಂಗಲ, 13ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ತಾಲ್ಲೂಕಿನ ಬೆಳ್ಳೂರು ಕ್ರಾಸ್ ಸಮೀಪದ ಕನ್ನಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಭಾನುವಾರ ನೆರವೇರಿತು.

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನೂತನ ದೇವಸ್ಥಾನವನ್ನು ಲೋಕಾರ್ಪಣೆ ಮಾಡಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದೇವಸ್ಥಾನದ ಕಳಸ ಪ್ರತಿಷ್ಠಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಶಾಸಕರಾದ ಕದಲೂರು ಉದಯ್, ಶರತ್ ಬಚ್ಚೇಗೌಡ, ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಎಂಎಲ್ಸಿ ಅಪ್ಪಾಜಿಗೌಡ, ವೆಂಕಟರಮಣಗೌಡ (ಸ್ಟಾರ್ ಚಂದ್ರು) ಸೇರಿದಂತೆ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎನ್. ಚಲುವರಾಯಸ್ವಾಮಿ, 2028ರಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಡಿ.ಕೆ. ಶಿವಕುಮಾರ್ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ದೇವರ ಕೃಪೆಯಿಂದ ನನಗೂ ಮತ್ತೆ ಸಚಿವ ಸ್ಥಾನ ದೊರೆತಿದೆ. ನೀರಾವರಿ ವಿಚಾರದಲ್ಲಿ ಹಲವು ಸವಾಲುಗಳಿದ್ದು, ನಿಮ್ಮ ಆಶೀರ್ವಾದ ಇರಲಿ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. 2023ರಲ್ಲಿ ಕೇಂದ್ರದಿಂದ ರೈತರಿಗೆ ಬರಬೇಕಿದ್ದ ಅನುದಾನ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೂಲಕ ಹಣವನ್ನು ಪಡೆದು ರೈತರಿಗೆ ನೀಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಚುಂಚನಗಿರಿ ಕ್ಷೇತ್ರದಲ್ಲಿ ಆಲದಮರದಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಮಠವನ್ನು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮುನ್ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಉತ್ತಮ ಮಳೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ಸಚಿವರು ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande