ಶಾಲೆಗಳ ಸಮಯ ಬದಲಾವಣೆ ಬಗ್ಗೆ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ
ಮಧು ಬಂಗಾರಪ್ಪ
schools-timing-change-to-be-decided-after-discussion-madhu-bangarappa


ಬೆಂಗಳೂರು, 13 ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ರಾಜ್ಯದ ಶಾಲೆಗಳ ಸಮಯ ಬದಲಾವಣೆ ಕುರಿತು ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಾಲೆಗಳ ಆರಂಭದ ಸಮಯವನ್ನು ಬದಲಾಯಿಸುವ ಕುರಿತು ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದಿಲ್ಲ.

ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

“ಶಾಲೆಗಳ ಸಮಯ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಎಲ್ಲರ ಅಭಿಪ್ರಾಯಗಳನ್ನು ಪಡೆದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಮಧು ಬಂಗಾರಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶಾಲೆಗಳ ಸಮಯ ಬದಲಾವಣೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದಂತೆ ಹಾಗೂ ಶಿಕ್ಷಕರು ಮತ್ತು ಪೋಷಕರಿಗೂ ಅನುಕೂಲವಾಗುವ ರೀತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande