ಬರ ಪರಿಹಾರದ ಮಾನದಂಡ ಮರುಪರಿಶೀಲಿಸಲು ಕೇಂದ್ರಕ್ಕೆ ಜಿ. ಪರಮೇಶ್ವರ ಒತ್ತಾಯ
ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಬದಲಾಗುತ್ತಿರುವ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಬರ ಪರಿಹಾರದ ಮಾನದಂಡಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಈ ಕುರಿತ
ಡಿಸಿಎಂ ಎಕ್ಸ್ ಪೋಸ್ಟ್


ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಬದಲಾಗುತ್ತಿರುವ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಬರ ಪರಿಹಾರದ ಮಾನದಂಡಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮಳೆಯ ಕೊರತೆ, ಬೆಳೆ ನಷ್ಟ, ಒಣಹವೆ ಹಾಗೂ ಸ್ಥಳೀಯ ಪರಿಸ್ಥಿತಿಗಳ ವಾಸ್ತವ ಪರಿಣಾಮಗಳನ್ನು ವೈಜ್ಞಾನಿಕವಾಗಿ ಅರ್ಥೈಸುವುದು ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಯಲ್ಲಿ ಪ್ರಸ್ತುತ ಬರ ಪರಿಹಾರದ ಮಾನದಂಡಗಳು ರೈತರ ನೈಜ ಸಂಕಷ್ಟವನ್ನು ಸಂಪೂರ್ಣವಾಗಿ ಪ್ರತಿಬಿಂಬಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ವಿಶೇಷವಾಗಿ ಕರ್ನಾಟಕದಂತಹ ಕೃಷಿ ಅವಲಂಬಿತ ರಾಜ್ಯಗಳಲ್ಲಿ ಬರದ ಪರಿಣಾಮವನ್ನು ಸಮಗ್ರವಾಗಿ ಅಳೆಯುವ ವ್ಯವಸ್ಥೆ ಅಗತ್ಯವಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಗಳ ಪರಿಷ್ಕರಣೆ ಸಂದರ್ಭದಲ್ಲಿ ರಾಜ್ಯದ ವಾಸ್ತವಾಂಶಗಳನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಬರ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ತಲುಪಿಸುವ ವ್ಯವಸ್ಥೆ ಪರಿಣಾಮಕಾರಿಯಾಗಿರಬೇಕು ಎಂದು ಜಿ. ಪರಮೇಶ್ವರ ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande