ಗಣೇಶ ಚತುರ್ಥಿಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಸೇರಿ ಗಣ್ಯರಿಂದ ದೇಶದ ಜನತೆಗೆ ಶುಭಾಶಯ
ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಗಣಪತಿ ದೇವರ ಕೃಪ
प्रतीकात्मक


ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಗಣಪತಿ ದೇವರ ಕೃಪೆಯಿಂದ ದೇಶದಲ್ಲಿ ಸುಖ, ಶಾಂತಿ, ಸಮೃದ್ಧಿ ಹಾಗೂ ಸಂತೋಷ ನೆಲೆಸಲಿ ಎಂದು ಗಣ್ಯರು ಹಾರೈಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮಾಜಿಕ ಜಾಲತಾಣದಲ್ಲಿ ದೇಶ-ವಿದೇಶಗಳಲ್ಲಿ ನೆಲೆಸಿರುವ ಎಲ್ಲ ಭಾರತೀಯರಿಗೆ ಗಣೇಶ ಚತುರ್ಥಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಭಗವಾನ್ ಶ್ರೀ ಗಣೇಶರು ಬುದ್ಧಿ, ವಿವೇಕ, ಸಮೃದ್ಧಿ ಹಾಗೂ ಶುಭಾರಂಭದ ಪ್ರತೀಕವಾಗಿದ್ದಾರೆ. ಗಣೇಶ ಚತುರ್ಥಿ ಹಬ್ಬವು ಜೀವನದಲ್ಲಿ ಶಕ್ತಿ, ಜ್ಞಾನ ಮತ್ತು ಸಕಾರಾತ್ಮಕತೆಯನ್ನು ತುಂಬುವುದರ ಜೊತೆಗೆ ಹೊಸ ಸಂಕಲ್ಪಗಳೊಂದಿಗೆ ಪ್ರಗತಿಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಎಲ್ಲರ ಜೀವನದಲ್ಲಿ ಸುಖ-ಶಾಂತಿ, ಉತ್ತಮ ಆರೋಗ್ಯ ಹಾಗೂ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಭಗವಾನ್ ಗಣೇಶರನ್ನು ವಿಘ್ನಹರ್ತೃ ಹಾಗೂ ಜ್ಞಾನದ ಪ್ರತೀಕ ಎಂದು ಬಣ್ಣಿಸಿದ್ದಾರೆ. ಗಣೇಶರು ಎಲ್ಲರಿಗೂ ಶಾಂತಿ, ಸಮೃದ್ಧಿ ಮತ್ತು ಸಂತೋಷದ ಆಶೀರ್ವಾದ ನೀಡಲಿ ಎಂದು ಹಾರೈಸಿದ ಅವರು, ವಿಶ್ವಾಸ ಮತ್ತು ದೃಢ ಸಂಕಲ್ಪದೊಂದಿಗೆ ಪ್ರತಿಯೊಂದು ಅಡೆತಡೆಯನ್ನೂ ದಾಟುವ ಸ್ಫೂರ್ತಿಯನ್ನು ಪಡೆಯುವಂತೆ ಜನತೆಗೆ ಕರೆ ನೀಡಿದ್ದಾರೆ.

ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ ಅವರು ಗಣೇಶರು ಎಲ್ಲರ ಜೀವನದ ವಿಘ್ನ-ಬಾಧೆಗಳನ್ನು ದೂರ ಮಾಡಿ ಸುಖ, ಶಾಂತಿ, ಸಮೃದ್ಧಿ ಹಾಗೂ ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ. ಭಗವಾನ್ ಗಣೇಶರ ಆಶೀರ್ವಾದವು ರಾಷ್ಟ್ರದ ಪ್ರಗತಿ ಮತ್ತು ಜನಕಲ್ಯಾಣದ ಸಂಕಲ್ಪಕ್ಕೆ ಹೊಸ ಶಕ್ತಿ ನೀಡಲಿ ಎಂದು ಅವರು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಗವಾನ್ ಗಣೇಶರು ಜ್ಞಾನ, ವಿವೇಕ, ಸಮೃದ್ಧಿ ಹಾಗೂ ಶುಭಾರಂಭದ ಪ್ರತೀಕವಾಗಿದ್ದಾರೆ ಎಂದು ತಿಳಿಸಿದ್ದಾರೆ. ಗಣೇಶ ಚತುರ್ಥಿಯು ಭಾರತೀಯರು ತಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ಬೆಸೆದುಕೊಂಡಿರುವುದರ ಜೊತೆಗೆ ಸಮಾಜದಲ್ಲಿ ಏಕತೆ, ಸೌಹಾರ್ದತೆ ಮತ್ತು ಸಹಕಾರದ ಭಾವನೆಯನ್ನು ಬಲಪಡಿಸಲು ಪ್ರೇರಣೆ ನೀಡುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಣಪತಿ ಬಪ್ಪನ ಕೃಪೆಯಿಂದ ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಮಂಗಳ ನೆಲೆಸಲಿ ಎಂದು ಹಾರೈಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಭಗವಾನ್ ಗಣೇಶರು ಎಲ್ಲರ ಮೇಲೂ ತಮ್ಮ ಕೃಪೆಯನ್ನು ಸದಾ ಇರಿಸಲಿ ಎಂದು ಪ್ರಾರ್ಥಿಸಿ, ‘ಗಣಪತಿ ಬಪ್ಪಾ ಮೋರಯಾ’ ಎಂದು ಘೋಷಿಸಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು “ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ, ನಿರ್ವಿಘ್ನಂ ಕುರು ಮೇ ದೇವ ಸರ್ವಕಾರ್ಯೇಷು ಸರ್ವದಾ” ಎಂಬ ಪ್ರಾರ್ಥನೆಯ ಮೂಲಕ ಭಗವಾನ್ ಗಣೇಶರು ಎಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ, ಶಾಂತಿ ಹಾಗೂ ಯಶಸ್ಸನ್ನು ತರಲಿ ಮತ್ತು ಎಲ್ಲ ಅಡೆತಡೆಗಳನ್ನು ನಿವಾರಿಸಲಿ ಎಂದು ಹಾರೈಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಕೂಡ ಭಗವಾನ್ ಗಣೇಶರು ದೇಶದ ಜನರ ಜೀವನದಲ್ಲಿ ಸಂತೋಷ, ಶಾಂತಿ, ಸೌಭಾಗ್ಯ ಮತ್ತು ಸಮೃದ್ಧಿಯನ್ನು ತುಂಬಲಿ ಎಂದು ಪ್ರಾರ್ಥಿಸಿದ್ದಾರೆ.

ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರು ಗಣೇಶ ಚತುರ್ಥಿಯ ಶುಭಾಶಯಗಳನ್ನು ತಿಳಿಸಿ, ವಿಘ್ನಹರ್ತೃ ಶ್ರೀ ಗಣೇಶರ ಕೃಪೆಯಿಂದ ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ, ಶಾಂತಿ ಮತ್ತು ಯಶಸ್ಸು ದೊರೆಯಲಿ ಎಂದು ಹಾರೈಸಿದ್ದಾರೆ.

-------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande