
ಕೋಲಾರ, 14 ಸೆಪ್ಟೆಂಬರ್ (ಹಿ.ಸ)
ಆಂಕರ್ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಬೆಳಗ್ಗೆ ೧೦:೦೦ ಗಂಟೆಗೆ ಕೋಲಾರ ಟೌನ್ ನ ಶ್ರೀ ಟಿ. ಚನ್ನಯ್ಯ ರಂಗಮಂದಿರದಲ್ಲಿ 'ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಮತ್ತು ಸಮಾನತೆಯ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ 'ಸಂವಿಧಾನ ಪೀಠಿಕೆ ಪ್ರವಚನ' ಮಾಡಲಾಗುವುದು. ಜೊತೆಗೆ, ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯ ಪರಿಚಯವನ್ನು ಮಾಡಿಕೊಡುವ ಪ್ರಯುಕ್ತ 'ಯುವ ಸಂಸತ್ತು' ಸಭೆಗೂ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು.
ಆದ್ದರಿಂದ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಮಾಜದ ಎಲ್ಲಾ ಗಣ್ಯರು, ವಿವಿಧ ಸಂಘ-ಸ0ಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋಲಾರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್