ಕೇದಾರನಾಥ ಮಾದರಿ ಮಂದಿರದಲ್ಲಿ ಗಣೇಶ ಪ್ರತಿಷ್ಠಾಪನೆ
ಕಲಬುರಗಿ ಗಣೇಶ ಪ್ರತಿಷ್ಠಾಪನೆ
Kalaburagi-Ganesh-Festival-Kedarnath-Temple-Model-Mandir-Installed


ಕಲಬುರಗಿ, 14 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಗೌರಿ–ಗಣೇಶ ಹಬ್ಬದ ಅಂಗವಾಗಿ ನಗರದಲ್ಲಿ ಗಣೇಶೋತ್ಸವದ ಸಂಭ್ರಮ ಮನೆ ಮಾಡಿದ್ದು, ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಗರದ ಸೂಪರ್ ಮಾರ್ಕೆಟ್ ಬಳಿ ಕಲಬುರಗಿ ಹಿಂದೂ ಮಹಾ ಗಣಪತಿ ಸಮಿತಿಯ ವತಿಯಿಂದ ಈ ಬಾರಿ ಕೇದಾರನಾಥ ದೇವಾಲಯದ ಮಾದರಿಯಲ್ಲಿ ಭವ್ಯ ಮಂದಿರ ನಿರ್ಮಿಸಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ.

ಗಣೇಶ ಪ್ರತಿಷ್ಠಾಪನೆ ಬಳಿಕ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಪ್ರತಿವರ್ಷ ವಿಭಿನ್ನ ರೀತಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಗಮನ ಸೆಳೆಯುತ್ತಿರುವ ಸಮಿತಿಯು, ಈ ಬಾರಿ ಕೇದಾರನಾಥ ದೇವಾಲಯದ ಮಾದರಿಯ ಮಂಟಪ ನಿರ್ಮಿಸಿದೆ.

ಗಣೇಶೋತ್ಸವವನ್ನು 21 ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಿದ್ಧತೆ ಮಾಡಿಕೊಂಡಿದೆ.

ಗಣೇಶ ಮೂರ್ತಿಯ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ವಿಶೇಷ ಪೂಜೆ ಹಾಗೂ ಅಲಂಕಾರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಸಮಿತಿ ಪದಾಧಿಕಾರಿಗಳ ಹೇಳಿಕೆ:“ಪ್ರತಿವರ್ಷ ವಿಭಿನ್ನ ಪರಿಕಲ್ಪನೆಯೊಂದಿಗೆ ಗಣೇಶೋತ್ಸವ ಆಚರಿಸುತ್ತಿದ್ದು, ಈ ಬಾರಿ ಕೇದಾರನಾಥ ದೇವಾಲಯದ ಮಾದರಿಯಲ್ಲಿ ಮಂದಿರ ನಿರ್ಮಿಸಿ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ.

21 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande