
ಬಾಗಲಕೋಟೆ, 14 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ವೆಂಕಟೇಶ್ವರ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮಾರುತೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಶ್ರೀ ಮಾರುತೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ನಡೆಯಲಿರುವ ಜಾತ್ರೋತ್ಸವವನ್ನು ಭಕ್ತಿಭಾವ ಹಾಗೂ ಸಡಗರದಿಂದ ಯಶಸ್ವಿಗೊಳಿಸೋಣ ಎಂದು ಮುಖಂಡ ಲೋಕಣ್ಣ ಕತ್ತಿ ಮನವಿ ಮಾಡಿದರು.
ಲೋಕಾಪುರ ಪಟ್ಟಣದಲ್ಲಿ ಶ್ರೀ ಮಾರುತೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ನಡೆದ ಆಮಂತ್ರಣ ಪತ್ರಿಕೆ ವಿತರಣೆ ಹಾಗೂ ಸಮಾರಂಭದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾರುತೇಶ್ವರ ದೇವಸ್ಥಾನದ ನಿರ್ಮಾಣವು ಪಟ್ಟಣದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಗೆ ಮತ್ತಷ್ಟು ಮೆರುಗು ನೀಡಲಿದೆ ಎಂದು ಹೇಳಿದರು.
ಸೆ. 19ರಿಂದ 21ರವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜಾ ವಿಧಿವಿಧಾನಗಳು ನಡೆಯಲಿವೆ. ಈ ಸಂದರ್ಭದಲ್ಲಿ ದೇವಸ್ಥಾನದ ಉದ್ಘಾಟನೆ, ಮಾರುತೇಶ್ವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಗುವುದು.
ಜಾತ್ರೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಕೋರಿದರು.
ಲೋಕಾಪುರ ಪಟ್ಟಣದ ಜತೆಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು, ಸಾರ್ವಜನಿಕರು ಹಾಗೂ ಧಾರ್ಮಿಕ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜಾತ್ರೋತ್ಸವಕ್ಕೆ ಮೆರುಗು ತರಬೇಕು. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಕ್ರಮದಲ್ಲಿ ಕೈಜೋಡಿಸಿ ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಲೋಕಣ್ಣ ಕತ್ತಿ ಕರೆ ನೀಡಿದರು.
ಮೂರು ದಿನಗಳ ಜಾತ್ರೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಭಕ್ತರಿಗೆ ಅನುಕೂಲವಾಗುವಂತೆ ವಿವಿಧ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಮಲ್ಲಯ್ಯನ ಗುಡ್ಡದ ಮಹಾ ರುದ್ರಯ್ಯ ಸ್ವಾಮೀಜಿ, ಎಂ.ಎಂ. ವಿರಕ್ತಮಠ, ಎಸ್.ಎನ್. ಹಿರೇಮಠ, ವಿ.ಎಂ. ತೆಗ್ಗಿ, ಯಮನಪ್ಪ ಹೊರಟ್ಟಿ, ಬಸನಗೌಡ ಪಾಟೀಲ, ಡಿ.ಆರ್. ದಾಸರೆಡ್ಡಿ, ಹನಮಂತಗೌಡ ಪಾಟೀಲ, ಸುರೇಶ ಅಂಕಲಗಿ, ವೆಂಕಟೇಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande