ರೇಷನ್ ಕಾರ್ಡ್ ಇ–ಕೆವೈಸಿ ಗಡುವು ವಿಸ್ತರಣೆ ಚರ್ಚಿಸಿ ತೀರ್ಮಾನ: ಡಿಸಿಎಂ
ರೇಷನ್ ಕಾರ್ಡ್ ಇ–ಕೆವೈಸಿ
Ration-Card-E-KYC-Deadline-Extension-DyCM-Gives-Big-Update


ಬೆಂಗಳೂರು, 14 ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ರಾಜ್ಯದಲ್ಲಿ ರೇಷನ್ ಕಾರ್ಡ್ಗಳ ಇ–ಕೆವೈಸಿ ಪ್ರಕ್ರಿಯೆಗೆ ನಿಗದಿಪಡಿಸಿರುವ ಗಡುವು ವಿಸ್ತರಣೆ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಪಡಿತರ ಚೀಟಿದಾರರ ಇ–ಕೆವೈಸಿಗೆ ಸೆಪ್ಟೆಂಬರ್ 30, 2026ರವರೆಗೆ ಗಡುವು ನೀಡಲಾಗಿದೆ. ಆದರೆ ರಾಜ್ಯದ ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಯಿಂದಾಗಿ ಫಲಾನುಭವಿಗಳು ಪರದಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್, “ರೇಷನ್ ಕಾರ್ಡ್ ಇ–ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇವೆ.

ಸದ್ಯ ಸರಣಿ ರಜೆ ಬಂದಿದೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇ–ಕೆವೈಸಿ ಪೂರ್ಣಗೊಳಿಸಲು ನ್ಯಾಯಬೆಲೆ ಅಂಗಡಿಗಳ ಮುಂದೆ ಜನರು ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದ್ದು, ವೃದ್ಧರು ಹಾಗೂ ಮಹಿಳೆಯರು ಸೇರಿದಂತೆ ಹಲವರು ತೊಂದರೆ ಅನುಭವಿಸುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande