ರಾಜ್ಯದಲ್ಲಿ ವಿದ್ಯುತ್ ಕೊರತೆ: ಪಕ್ಕದ ರಾಜ್ಯಗಳಿಂದ ವಿದ್ಯುತ್ ಖರೀದಿ ಅನಿವಾರ್ಯ
ಬೆಂಗಳೂರು, 14 ಸೆಪ್ಟೆಂಬರ್(ಹಿ.ಸ.) ಆ್ಯಂಕರ್: ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಭೀಕರ ಬರಗಾಲ ಎದುರಾಗಿದ್ದು, ಅಂತರ್ಜಲ ಮಟ್ಟ ಕುಸಿತದಿಂದ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕನಕಪುರದಲ್ಲಿ ಮಾತನಾಡಿದ ಅವರು, ರಾತ್ರಿ ವೇಳೆಯ ಪೀಕ್ ಅವ
ರಾಜ್ಯದಲ್ಲಿ ವಿದ್ಯುತ್ ಕೊರತೆ: ಪಕ್ಕದ ರಾಜ್ಯಗಳಿಂದ ವಿದ್ಯುತ್ ಖರೀದಿ ಅನಿವಾರ್ಯ


ಬೆಂಗಳೂರು, 14 ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಭೀಕರ ಬರಗಾಲ ಎದುರಾಗಿದ್ದು, ಅಂತರ್ಜಲ ಮಟ್ಟ ಕುಸಿತದಿಂದ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕನಕಪುರದಲ್ಲಿ ಮಾತನಾಡಿದ ಅವರು, ರಾತ್ರಿ ವೇಳೆಯ ಪೀಕ್ ಅವಧಿಯಲ್ಲಿ ವಿದ್ಯುತ್ ಪೂರೈಕೆ ಮಾಡಬೇಕಾದರೆ ದುಬಾರಿ ದರದಲ್ಲಿ ವಿದ್ಯುತ್ ಖರೀದಿಸುವ ಅನಿವಾರ್ಯತೆ ಎದುರಾಗಿದೆ.

ಪ್ರತಿ ಯೂನಿಟ್ಗೆ ₹11ರಿಂದ ₹13ರವರೆಗೆ ಪಾವತಿಸಿ ವಿದ್ಯುತ್ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ವಿದ್ಯುತ್ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಪಕ್ಕದ ರಾಜ್ಯಗಳೊಂದಿಗೆ ಚರ್ಚಿಸುವಂತೆ ಇಂಧನ ಸಚಿವರಿಗೆ ಸೂಚನೆ ನೀಡಲಾಗಿದೆ.

ಬರಗಾಲದ ಪರಿಣಾಮ ನೀರು ಮತ್ತು ವಿದ್ಯುತ್ ಸಮಸ್ಯೆ ಎದುರಾಗಿದ್ದು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಹೂಡಿಕೆ ಮಾಡಲು ಹಲವು ಉದ್ಯಮಿಗಳು ಆಸಕ್ತಿ ತೋರುತ್ತಿದ್ದು, ಅವರಿಗೆ ನೀರು, ವಿದ್ಯುತ್ ಹಾಗೂ ಭೂಮಿಯ ಅಗತ್ಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದೆ ಎಂದರು.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಉತ್ತಮ ಮಳೆಗಾಗಿ ಜನರು ಪ್ರಾರ್ಥಿಸಬೇಕು ಎಂದು ಮನವಿ ಮಾಡಿದ ಅವರು, ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಎದುರಾಗುವ ಸವಾಲುಗಳನ್ನು ಸರ್ಕಾರ ಸಮರ್ಥವಾಗಿ ಎದುರಿಸಲಿದೆ ಎಂದು ಹೇಳಿದರು. ---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande