ಭಾಲ್ಕಿಯಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ
ಬೀದರ್, 14 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಭಾಲ್ಕಿ ನಗರದ ಸಿದ್ಧಾರ್ಥ್ ನಗರದಲ್ಲಿ ಸುಮಾರು ₹1.18 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಸಚಿವ ಈಶ್ವರ ಖಂಡ್ರೆ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು
ಶಂಕುಸ್ಥಾಪನೆ


ಬೀದರ್, 14 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಭಾಲ್ಕಿ ನಗರದ ಸಿದ್ಧಾರ್ಥ್ ನಗರದಲ್ಲಿ ಸುಮಾರು ₹1.18 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಸಚಿವ ಈಶ್ವರ ಖಂಡ್ರೆ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಅವರ ವಾಸಸ್ಥಳದ ಸಮೀಪದಲ್ಲೇ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಆರೋಗ್ಯ ಕೇಂದ್ರದ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಆರೋಗ್ಯ ಕೇಂದ್ರದ ನಿರ್ಮಾಣ ಪೂರ್ಣಗೊಂಡ ಬಳಿಕ ಸಿದ್ಧಾರ್ಥ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳು, ಆರೋಗ್ಯ ತಪಾಸಣೆ, ಚಿಕಿತ್ಸೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳು ಸುಲಭವಾಗಿ ದೊರೆಯಲಿವೆ ಎಂದರು.

ಜನರ ಆರೋಗ್ಯ ಮತ್ತು ಕಲ್ಯಾಣವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ಭಾಲ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜತೆಗೆ ಆರೋಗ್ಯ ಕ್ಷೇತ್ರದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ನಿರಂತರವಾಗಿ ಶ್ರಮಿಸಲಾಗುವುದು ಎಂದು ಈಶ್ವರ ಖಂಡ್ರೆ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande