ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಭೀಕರ ಕೊಲೆ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.ಯುವಕನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗ
ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಭೀಕರ ಕೊಲೆ


ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.ಯುವಕನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಯುವಕನ ಗುರುತು ಹಾಗೂ ಕೊಲೆಗೆ ನಿಖರ ಕಾರಣದ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.

ಪೊಲೀಸರ ಹೇಳಿಕೆ: ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕೊಲೆಗೆ ಕಾರಣ ಹಾಗೂ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶೀಘ್ರದಲ್ಲೇ ಪ್ರಕರಣದ ಸಂಪೂರ್ಣ ವಿವರ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande