ಕೇಂದ್ರ ಸಾಂಖ್ಯಿಕ ಕಚೇರಿ ಪ್ರಾದೇಶಿಕ ಕ್ರೀಡಾಕೂಟ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಷ್ಟಿಯ ಸಾಂಖ್ಯಿಕ ಕಚೇರಿ (ಕ್ಷೇತ್ರ ಕಾರ್ಯಾಚರಣೆ ವಿಭಾಗ) ವತಿಯಿಂದ ರಾಷ್ಟಿಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಉಪ-ಪ್ರಾದೇಶಿಕ
ಕೇಂದ್ರ ಸಾಂಖ್ಯಿಕ ಕಚೇರಿ ಪ್ರಾದೇಶಿಕ ಕ್ರೀಡಾಕೂಟ: ಬಳ್ಳಾರಿಗೆ ಕ್ರಿಕೆಟ್


ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಷ್ಟಿಯ ಸಾಂಖ್ಯಿಕ ಕಚೇರಿ (ಕ್ಷೇತ್ರ ಕಾರ್ಯಾಚರಣೆ ವಿಭಾಗ) ವತಿಯಿಂದ ರಾಷ್ಟಿಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಉಪ-ಪ್ರಾದೇಶಿಕ ಕಚೇರಿ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಹುಬ್ಬಳ್ಳಿ ಪ್ರಾದೇಶಿಕ ಕಚೇರಿ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಹುಬ್ಬಳ್ಳಿ ಪ್ರಾದೇಶಿಕ ಕಚೇರಿ ಆಶ್ರಯದಲ್ಲಿ, ಬಳ್ಳಾರಿ ಉಪ-ಪ್ರಾದೇಶಿಕ ಕಚೇರಿಯ ಆತಿಥ್ಯದಲ್ಲಿ ನಗರದ ವೀರಶೈವ ಪದವಿ ಕಾಲೇಜು ಮೈದಾನದಲ್ಲಿ ಎರಡು ದಿನಗಳ ಕಾಲ ಕ್ರಿಕೆಟ್ ಹಾಗೂ ಬ್ಯಾಡ್ಮಿಂಟನ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕ್ರೀಡಾಕೂಟದಲ್ಲಿ ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಹಾಗೂ ಬೆಳಗಾವಿ ಕಚೇರಿಗಳ ಒಟ್ಟು ನಾಲ್ಕು ತಂಡಗಳು ಭಾಗವಹಿಸಿ ಜಿದ್ದಾಜಿದ್ದಿನ ಪೈಪೋಟಿ ನಡೆಸಿದವು. ರೋಚಕವಾಗಿ ನಡೆದ ಅಂತಿಮ ಪಂದ್ಯಗಳಲ್ಲಿ ಬಳ್ಳಾರಿ ತಂಡವು ಕ್ರಿಕೆಟ್ನಲ್ಲಿ ಜಯಭೇರಿ ಬಾರಿಸಿದರೆ, ಬ್ಯಾಡ್ಮಿಂಟನ್ನಲ್ಲಿ ಹುಬ್ಬಳ್ಳಿ ತಂಡ ಗೆಲುವಿನ ನಗೆ ಬೀರಿತು.

ಸಮಾರಂಭದಲ್ಲಿ ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ಉಪ ನಿರ್ದೇಶಕ ಮಹದೇವಪ್ಪ, ಕಲಬುರಗಿ ಉಪ-ಪ್ರಾದೇಶಿಕ ಕಚೇರಿಯ ಪ್ರಭಾರ ಸಹಾಯಕ ನಿರ್ದೇಶಕಿ ಜಾಧವ್ ಸುಜಾತಾ ತಾನಾಜಿ, ಬಳ್ಳಾರಿ ಉಪ-ಪ್ರಾದೇಶಿಕ ಕಚೇರಿಯ ಪ್ರಭಾರ ಸಹಾಯಕ ನಿರ್ದೇಶಕ ಪಾಟೀಲ್ ಸಮೀರ್ ವಸಂತ್ ಹಾಗೂ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಕ್ರೀಡಾಕೂಟಕ್ಕೆ ಅಗತ್ಯ ಮೈದಾನ ಹಾಗೂ ಮೂಲಸೌಕರ್ಯ ಕಲ್ಪಿಸಿ ಸಹಕರಿಸಿದ ವೀರಶೈವ ಸಂಘದ ಅಧ್ಯಕ್ಷ ಡಾ. ಕೆ.ಎಸ್. ಮಹಾಂತೇಶ್ ಹಾಗೂ ಕಾರ್ಯದರ್ಶಿ ಡಾ. ಅರವಿಂದ್ ಪಾಟೀಲ್ ಅವರಿಗೆ ಆಯೋಜಕರು ಕೃತಜ್ಞತೆ ಸಲ್ಲಿಸಿದರು. ಪಂದ್ಯಾವಳಿಯ ಅಚ್ಚುಕಟ್ಟು ಆಯೋಜನೆ ಹಾಗೂ ಆತಿಥ್ಯಕ್ಕೆ ಅಧಿಕಾರಿಗಳು ಮತ್ತು ಕ್ರೀಡಾಪಟುಗಳು ಮೆಚ್ಚುಗೆ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande