ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಶಾಸಕ ಮನಗೂಳಿ ಸೂಚನೆ
ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದ್ದಾರೆ. ಸಿಂದಗಿ ಪಟ್ಟಣದಲ್ಲಿರುವ ತಮ್ಮ ಗೃಹಕಚೇರಿಯಲ
ಅಹವಾಲು


ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದ್ದಾರೆ.

ಸಿಂದಗಿ ಪಟ್ಟಣದಲ್ಲಿರುವ ತಮ್ಮ ಗೃಹಕಚೇರಿಯಲ್ಲಿ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರನ್ನು ಆತ್ಮೀಯವಾಗಿ ಭೇಟಿ ಮಾಡಿದ ಅವರು, ಸಾರ್ವಜನಿಕರಿಂದ ವಿವಿಧ ಬೇಡಿಕೆಗಳು ಹಾಗೂ ಕುಂದುಕೊರತೆಗಳಿಗೆ ಸಂಬಂಧಿಸಿದ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಜನರು ತಮ್ಮ ಗ್ರಾಮ ಹಾಗೂ ವೈಯಕ್ತಿಕ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ರಸ್ತೆ, ಕುಡಿಯುವ ನೀರು, ವಿದ್ಯುತ್, ಚರಂಡಿ, ಮೂಲಸೌಕರ್ಯ, ಸರ್ಕಾರಿ ಸೌಲಭ್ಯಗಳು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದೆ ನೇರವಾಗಿ ಹೇಳಿಕೊಂಡ ಸಾರ್ವಜನಿಕರು, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.

ಸಾರ್ವಜನಿಕರು ಸಲ್ಲಿಸಿದ ಪ್ರತಿಯೊಂದು ಮನವಿಯನ್ನು ಶಾಸಕ ಅಶೋಕ್ ಮನಗೂಳಿ ಅವರು ಆಪ್ತವಾಗಿ ಆಲಿಸಿ, ಸಮಸ್ಯೆಗಳ ಕುರಿತು ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಂಡರು. ಸಾಧ್ಯವಾದಷ್ಟು ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸ್ಥಳದಲ್ಲಿಯೇ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಬಂದ ಮನವಿಗಳನ್ನು ವಿಳಂಬ ಮಾಡದೆ ಪರಿಶೀಲಿಸಿ, ನಿಯಮಾನುಸಾರ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜನಪ್ರತಿನಿಧಿಯಾಗಿ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವುದು ತಮ್ಮ ಜವಾಬ್ದಾರಿಯಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ಮುಕ್ತವಾಗಿ ತಮ್ಮ ಗಮನಕ್ಕೆ ತರಬಹುದು. ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಶಾಸಕ ಅಶೋಕ್ ಮನಗೂಳಿ ಭರವಸೆ ನೀಡಿದರು.

ಗೃಹಕಚೇರಿಯಲ್ಲಿ ನಡೆದ ಸಾರ್ವಜನಿಕರ ಭೇಟಿ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande