

ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸೆ.17 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ಜಿಲ್ಲಾ ವಿಶ್ವಕರ್ಮ ವಿಕಾಸ ವೇದಿಕೆಯ ಅಧ್ಯಕ್ಷ ಚಂದ್ರಕಾAತ್ ಸ.ಸೋನಾರ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನ್ಯಾಯವಾದಿಗಳಾದ ತ್ರಿವೇಣಿ ಪಿ. ಪತ್ತಾರ್ ಅವರು ಜಯಂತಿ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಅನ್ನಪೂರ್ಣ ತಂಡದಿ0ದ ಭಕ್ತಿ ಸಂಗೀತ ಇರಲಿದೆ.
*ಮೆರವಣಿಗೆ:*
ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಬೆಂಗಳೂರು ರಸ್ತೆ- ಹಳೇ ಬ್ರೂಸ್ಪೇಟೆ ಪೊಲೀಸ್ ಠಾಣೆ- ತೇರು ಬೀದಿ- ಹೆಚ್ಆರ್ ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ತಲುಪಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್., ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್.ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್