
ಬಳ್ಳಾರಿ, 16 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ನಾಳೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಅವರು, ಸೆಪ್ಟೆಂಬರ್ 16 ರಂದು ರಾತ್ರಿ ಚಳ್ಳಕೆರೆಯಿಂದ ಬಳ್ಳಾರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಸೆಪ್ಟೆಂಬರ್ 17 ರಂದು ಬೆಳಿಗ್ಗೆ 09 ಗಂಟೆಗೆ ಬಳ್ಳಾರಿ ನಗರದ ಸರ್ಕಾರಿ ಪದವಿ ಪೂರ್ವ (ಮಾ.ಪು) ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2026ರ ಅಂಗವಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬಳಿಕ ಮಧ್ಯಾಹ್ನ 01 ಗಂಟೆಗೆ ಬಳ್ಳಾರಿಯಿಂದ ರಸ್ತೆ ಮಾರ್ಗವಾಗಿ ಮಂಗಳೂರಿಗೆ ನಿರ್ಗಮಿಸಲಿದ್ದಾರೆ .
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್