2028ರ ಚುನಾವಣೆ: 35 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಹೈಕಮಾಂಡ್ ಸಭೆ
ಹೈಕಮಾಂಡ್ ಸಭೆ
Congress-High-Command-Meeting-With-35-District-Presidents-Organization-Strengthening-Ahead-of-2028-Polls


ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಕರ್ನಾಟಕದಲ್ಲಿ ಮುಂಬರುವ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷವು ಸಂಘಟನೆ ಬಲಪಡಿಸುವತ್ತ ಗಮನ ಹರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ವೇಗ ನೀಡಲು ಹೈಕಮಾಂಡ್ ಸಭೆ ನಡೆಸಿದೆ.

ಸಭೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಮುಂಬರುವ ಚುನಾವಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ “ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ನ್ನು ಇನ್ನಷ್ಟು ಬಲಪಡಿಸಿ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜಾಗಬೇಕು” ಎಂಬ ಸಂದೇಶವನ್ನು ಹೈಕಮಾಂಡ್ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಕರ್ನಾಟಕದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದು ಕೂಡ ಸಂಘಟನಾ ಪುನರ್ವ್ಯವಸ್ಥೆಯ ಭಾಗವಾಗಿದೆ.

“2028ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಯನ್ನು ಬಲಪಡಿಸುವುದು ಪ್ರಮುಖ ಆದ್ಯತೆಯಾಗಿದೆ. ಕಾರ್ಯಕರ್ತರು ಹಾಗೂ ಜಿಲ್ಲಾ ಘಟಕಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.” ಎಂದು ಸಭೆಯಲ್ಲಿ ಸೂಚಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande