
ಬೀದರ್, 16 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ನಗರದ ಗುರುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲ ಉಂಟಾಗಿ, ಕೆಲ ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯೊಬ್ಬರಿಗೆ ಉಪನ್ಯಾಸಕರೊಬ್ಬರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗಬಾರದು ಎಂದು ಸೂಚಿಸಿದ್ದಾರೆ ಎನ್ನಲಾಗಿದ್ದು, ಇದನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗಲು ಏಕೆ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗಲು ಅವಕಾಶ ನೀಡುವುದಾಗಿ ಲಿಖಿತ ಭರವಸೆ ನೀಡಿದೆ.
ಈ ಕುರಿತು ಪ್ರತಿಭಟನಾಕಾರರು, “ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೆ ಯಾವುದೇ ಅಡ್ಡಿಪಡಿಸಬಾರದು. ಈ ಕುರಿತು ಆಡಳಿತ ಮಂಡಳಿ ಸ್ಪಷ್ಟತೆ ನೀಡಬೇಕು” ಎಂದು ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R