ಸೆಪ್ಟೆಂಬರ್ 18ರಂದು ಉದ್ಯೋಗ ಮೇಳ
ಬಳ್ಳಾರಿ, 16 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ‘ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್'' ಇವುಗಳ ಜಂಟಿ ಆಶ್ರಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯ
ಸೆಪ್ಟೆಂಬರ್ 18ರಂದು ಉದ್ಯೋಗ ಮೇಳ


ಬಳ್ಳಾರಿ, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ‘ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್' ಇವುಗಳ ಜಂಟಿ ಆಶ್ರಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಸಂದರ್ಶನವು ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್, 2ನೇ ಮಹಡಿ, ಅಯ್ಯಪ್ಪ-ಡಿ ಯು ಟವರ್, ಎಂಐಜಿ-3, ಕೆಹೆಚ್ಬಿ ಕಾಲೋನಿ, ಪಾರ್ವತಿ ನಗರ, ಕೆಎಫ್ಸಿ ಎದುರು, ಬಳ್ಳಾರಿ - 583103.ಇಲ್ಲಿ ನಡೆಯುವದು .

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ನೋಂದಣಿ ಶುಲ್ಕ ಇರುವುದಿಲ್ಲ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಬ್ಬರೂ ಈ ಅವಕಾಶವನ್ನು ಪಡೆದುಕೊಳ್ಳಬಹುದು.

ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದವರು ಅರ್ಹರು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ/ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ಆಗಮಿಸತಕ್ಕದ್ದು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮೊಬೈಲ್ ಸಂಖ್ಯೆಗಳಾದ 7619207762, 9663263086, 7676774293 ಅಥವಾ 6360408094 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande