ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ: ನವದಂಪತಿ ಬಲಿ
ನವದಂಪತಿ ಬಲಿ
Tumakuru-Highway-Hit-and-Run-Newlywed-Couple-Killed-Dwaralu-Bridge


ತುಮಕೂರು, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತ ದಂಪತಿ ಮೃತಪಟ್ಟಿರುವ ಘಟನೆ ಶಿರಾ ತಾಲ್ಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ.

ಮೃತರನ್ನು ಶಿರಾ ತಾಲ್ಲೂಕಿನ ಹುಣಿಸೇಕಟ್ಟೆ ಗ್ರಾಮದ ದರ್ಶನ್ (25) ಹಾಗೂ ಉಷಾರಾಣಿ (21) ಎಂದು ಗುರುತಿಸಲಾಗಿದೆ. ದಂಪತಿಗೆ ವಿವಾಹವಾಗಿ ಕೇವಲ ಒಂದೂವರೆ ತಿಂಗಳಾಗಿತ್ತು ಎನ್ನಲಾಗಿದೆ.

ನಿನ್ನೆ ದಂಪತಿ ಬೈಕ್ನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ದ್ವಾರಾಳು ಸೇತುವೆ ಮೇಲೆ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಉಷಾರಾಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಘಟನೆ ಹಿಟ್ ಅಂಡ್ ರನ್ ಪ್ರಕರಣವಾಗಿದೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande