
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:
ರಾಜ್ಯದ ಪೆಟ್ರೋಲ್ ಬಂಕ್ಗಳಲ್ಲಿ ಅಳತೆ ವ್ಯತ್ಯಯದ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಕಳೆದ ಒಂದು ವಾರದಲ್ಲಿ 805 ಪೆಟ್ರೋಲ್ ಬಂಕ್ಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, 768 ಬಂಕ್ಗಳಲ್ಲಿ ಅಳತೆ ವ್ಯತ್ಯಯ ಕಂಡುಬಂದಿದೆ. ಈ ಪೈಕಿ 101 ಬಂಕ್ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಾನೂನು ಮತ್ತು ಮಾಪನ ಇಲಾಖೆಯ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 5,946 ಪೆಟ್ರೋಲ್ ಬಂಕ್ಗಳಿವೆ. ಪರಿಶೀಲನೆಗೊಳಪಡಿಸಿದ 805 ಬಂಕ್ಗಳಲ್ಲಿದ್ದ 3,071 ಪೆಟ್ರೋಲ್ ಗನ್ಗಳ ಪೈಕಿ 2,618 ಗನ್ಗಳಲ್ಲಿ ಶಾರ್ಟ್ ಅಳತೆ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.
ನಿಯಮಾನುಸಾರ ಶೇ 0.5ರಷ್ಟು ಅಳತೆ ವ್ಯತ್ಯಾಸಕ್ಕೆ ಅವಕಾಶವಿದೆ. ಆದರೆ, ಕೆಲವು ಬಂಕ್ಗಳಲ್ಲಿ ಇದಕ್ಕಿಂತ ಹೆಚ್ಚಿನ ವ್ಯತ್ಯಾಸ ಕಂಡುಬಂದಿದ್ದು, ಮೂರು ಬಂಕ್ಗಳಲ್ಲಿ 10 ಮಿಲಿಲೀಟರ್ಗಿಂತಲೂ ಹೆಚ್ಚು ವ್ಯತ್ಯಾಸ ಪತ್ತೆಯಾಗಿದೆ ಎಂದು ಸಚಿವರು ತಿಳಿಸಿದರು.
ಪ್ರತಿದಿನ ಅಳತೆ ಪರಿಶೀಲನೆಗೆ ಸೂಚನೆಪೆಟ್ರೋಲ್ ಬಂಕ್ಗಳ ಮಾಲೀಕರು ಪ್ರತಿದಿನ ಪೆಟ್ರೋಲ್ ಗನ್ಗಳ ಅಳತೆಯನ್ನು ಪರಿಶೀಲಿಸುವಂತೆ ಸೂಚಿಸಲಾಗುವುದು.
ಬಂಕ್ಗಳ ಕ್ಯಾಲಿಬರೇಷನ್ ಹಾಗೂ ಪರಿಶೀಲನೆಯ ಅವಧಿಯನ್ನು ಸ್ಪಷ್ಟವಾಗಿ ನಮೂದಿಸಿ, ಸಾರ್ವಜನಿಕರ ಗಮನಕ್ಕೆ ಬರುವಂತೆ ಡಿಸ್ಪ್ಲೇನಲ್ಲಿ ಪ್ರದರ್ಶಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅರ್ಷದ್ ಹೇಳಿದರು.
ಗ್ರಾಹಕರಿಗೆ ಅಳತೆಯ ಬಗ್ಗೆ ಅನುಮಾನ ಬಂದಲ್ಲಿ, ನಿಗದಿತ ಮಾಪಕಗಳ ಮೂಲಕ ಪೆಟ್ರೋಲ್ ಅಥವಾ ಡೀಸೆಲ್ ಪ್ರಮಾಣವನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಬಂಕ್ಗಳಲ್ಲಿ ಸೂಕ್ತ ಶುಚಿತ್ವ, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆಯೂ ಸೂಚಿಸಲಾಗುವುದು ಎಂದರು.
ಕ್ಯಾಲಿಬರೇಷನ್ ನಿಯಮಕ್ಕೆ ರಾಜ್ಯದ ಆಕ್ಷೇಪಕೇಂದ್ರ ಸರ್ಕಾರ ಕ್ಯಾಲಿಬರೇಷನ್ಗೆ ಸಂಬಂಧಿಸಿದಂತೆ ಹೊರಡಿಸಿರುವ ಎರಡು ಅಧಿಸೂಚನೆಗಳಿಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಸಚಿವರು ಹೇಳಿದರು.
ಈ ಹಿಂದೆ ವರ್ಷಕ್ಕೊಮ್ಮೆ ಕ್ಯಾಲಿಬರೇಷನ್ ಮಾಡಿಸಬೇಕಿದ್ದ ನಿಯಮವನ್ನು ಎರಡು ವರ್ಷಕ್ಕೊಮ್ಮೆ ಮಾಡುವಂತೆ ಬದಲಾಯಿಸಲಾಗಿದೆ. ಅಲ್ಲದೆ, ಪೆಟ್ರೋಲ್ ಗನ್ಗಳ ಕ್ಯಾಲಿಬರೇಷನ್ ಅನ್ನು ಖಾಸಗಿಯವರು ಮಾಡಬಹುದು ಎಂಬ ಮತ್ತೊಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.
“ಖಾಸಗಿಯವರು ಕ್ಯಾಲಿಬರೇಷನ್ ಮಾಡಿದರೆ ಅದರ ವಿಶ್ವಾಸಾರ್ಹತೆಯನ್ನು ಹೇಗೆ ಖಚಿತಪಡಿಸಿಕೊಳ್ಳಬೇಕು ಎಂಬ ಪ್ರಶ್ನೆ ಇದೆ. ಬಂಕ್ ಮಾಲೀಕರು ತಮಗೆ ಪರಿಚಯವಿರುವವರಿಂದ ಸರ್ಟಿಫಿಕೇಟ್ ಪಡೆದುಕೊಳ್ಳುವ ಸಾಧ್ಯತೆ ಇರುವುದರಿಂದ ಗ್ರಾಹಕರಿಗೆ ತೊಂದರೆಯಾಗಬಹುದು” ಎಂದು ರಿಜ್ವಾನ್ ಅರ್ಷದ್ ಆಕ್ಷೇಪ ವ್ಯಕ್ತಪಡಿಸಿದರು.“ಈ ಎರಡು ಅಧಿಸೂಚನೆಗಳನ್ನು ರಾಜ್ಯ ಸರ್ಕಾರ ಒಪ್ಪುವುದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು” ಎಂದು ಅವರು ಹೇಳಿದರು.
ಪೆಟ್ರೋಲ್ ಬಂಕ್ಗಳಲ್ಲಿ ಅಳತೆ, ಗುಣಮಟ್ಟ, ಶುಚಿತ್ವ ಅಥವಾ ಇತರ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಸಾರ್ವಜನಿಕರು 18005991100 ಟೋಲ್ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡುವಂತೆ ಸಚಿವರು ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R