
ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ 2026–27ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 22ರಂದು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10.30ಕ್ಕೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣ ಮತ್ತು ಬಿಡಿಎಎ ಫುಟ್ಬಾಲ್ ಕ್ರೀಡಾ ಸಂಕೀರ್ಣ ಮೈದಾನದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಈ ಕ್ರೀಡಾಕೂಟದಲ್ಲಿ ಕೇವಲ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ಬೇರೆ ಜಿಲ್ಲೆಯವರಿಗೆ ಅವಕಾಶವಿರುವುದಿಲ್ಲ.
ಕ್ರೀಡಾಪಟುಗಳು ತಾವು ಪ್ರತಿನಿಧಿಸುವ ತಾಲೂಕು/ಜಿಲ್ಲೆಯ ಸ್ಥಳೀಯ ದೃಢೀಕರಣಕ್ಕಾಗಿ ಶಾಲಾ/ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಮುಂತಾದ ಅಧಿಕೃತ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವಿದ್ಯಾಭ್ಯಾಸ ಅಥವಾ ಉದ್ಯೋಗದಲ್ಲಿರುವವರು ತಮ್ಮ ಕಾಲೇಜು ಅಥವಾ ಸಂಸ್ಥೆಯ ಅಧಿಕೃತ ಗುರುತಿನ ಚೀಟಿಯೊಂದಿಗೆ ಭಾಗವಹಿಸಬಹುದು.
ರಕ್ಷಣಾ ಪಡೆ ಹಾಗೂ ಅರೆ ರಕ್ಷಣಾ ಪಡೆಯ ಸಿಬ್ಬಂದಿಗಳಿಗೆ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಒಬ್ಬ ಕ್ರೀಡಾಪಟು ಕೇವಲ ಒಂದು ಗುಂಪು ಕ್ರೀಡೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
*ಕ್ರೀಡೆಗಳು:*
ಸ್ಪರ್ಧಾ ಕ್ರೀಡೆಗಳು: ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್ (ಪುರುಷರಿಗೆ ಮಾತ್ರ), ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಬ್ಯಾಡ್ಮಿಂಟನ್, ಬಾಸ್ಕೆಟ್ಬಾಲ್, ಹಾಕಿ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ಕುಸ್ತಿ ಮತ್ತು ಯೋಗ. ನೇರ ಆಯ್ಕೆ ಕ್ರೀಡೆಗಳು: ಟೆನ್ನಿಸ್, ನೆಟ್ಬಾಲ್, ಈಜು, ವುಶೂ, ಟೆಕ್ವಾಂಡೋ, ಜುಡೋ ಮತ್ತು ಕರಾಟೆ.
*ಆನ್ಲೈನ್ ನೋಂದಣಿ ಕಡ್ಡಾಯ:*
ಪ್ರಸಕ್ತ ಸಾಲಿನಿಂದ ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ‘Dasara CM Cup 2026’ ಪೋರ್ಟಲ್/ಮೊಬೈಲ್ ಆಪ್ (https://dasaracmcup.in/) ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಪ್ರತಿಯನ್ನು ಸಲ್ಲಿಸಿದಲ್ಲಿ ಮಾತ್ರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ.
ಜಿಲ್ಲಾ ಮಟ್ಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ಪ್ರಯಾಣ ಭತ್ಯೆಯನ್ನು ಸರ್ಕಾರಿ ಬಸ್ ದರಗಳ ಅನ್ವಯ ‘ಕೆ2' ತಂತ್ರಾಂಶದ ಮೂಲಕ ನೇರವಾಗಿ ಕ್ರೀಡಾಪಟುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಎಂ. ಜಾಕೀರ್-9036335986, ಮಹಮ್ಮದ್ ಮಸೂದ್-9886688858, ರತಿಕಾಂತ್ (ಕಚೇರಿ ಸಿಬ್ಬಂದಿ)- 8971238689 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್