ಬಳ್ಳಾರಿ :ಎಚ್ಎಸ್ಕೆ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ
ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ಹಾನಗಲ್ಲು ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಛೇರಿಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಗುರುವಾರ ಆಚರಿಸಲಾಯಿತು. ಕನ್ನಡ ಭುವನೇಶ್ವರಿ ಮತ್ತು ಸರ್ದಾರ್ ವಲ್ಲಭ
ಬಳ್ಳಾರಿ :ಎಚ್ಎಸ್ಕೆ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ


ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ಹಾನಗಲ್ಲು ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಛೇರಿಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಗುರುವಾರ ಆಚರಿಸಲಾಯಿತು.

ಕನ್ನಡ ಭುವನೇಶ್ವರಿ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪೂಜೆಯನ್ನು ಸಲ್ಲಿಸಿ, ಪುಪ್ಷಾರ್ಚನೆ ಸಲ್ಲಿಸಲಾಯಿತು.

ಹಾನಗಲ್ಲು ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪಲ್ಲೇದ ಪ್ರಭುಲಿಂಗ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಬಿ. ಶ್ರೀಶೈಲಗೌಡ ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande