ಕಲ್ಯಾಣ ಕರ್ನಾಟಕ ಉತ್ಸವ: ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಸಿಎಂ
ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಬಂಜಾರ ಸಮುದಾಯದ ಮಹ
ಬಂಜಾರ ಸಮುದಾಯದ ಮಹಿಳೆಯರ ಜೊತೆ ಸಿಎಂ ಪೋಟೋ


ಸಾರ್ವಜನಿಕರ ಅಹವಾಲು ಆಲಿಸಿದ ಸಿಎಂ


ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಬಂಜಾರ ಸಮುದಾಯದ ಮಹಿಳೆಯರೊಂದಿಗೆ ಮುಖ್ಯಮಂತ್ರಿ ಛಾಯಾಚಿತ್ರ ತೆಗೆಸಿಕೊಂಡರು. ಇದೇ ವೇಳೆ ಕೆಕೆಆರ್‌ಟಿಸಿ ವತಿಯಿಂದ ‘ಕಲ್ಯಾಣ ರಥ’ದ 24 ನೂತನ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿದರು.

ಉತ್ಸವದ ಸ್ಥಳದಲ್ಲಿಯೇ ಮುಖ್ಯಮಂತ್ರಿ ಸಾರ್ವಜನಿಕರಿಂದ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande