ರಬಕವಿ-ಬನಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ವಿಶ್ವಕರ್ಮ ಜಯಂತೋತ್ಸವ
ಬಾಗಲಕೋಟೆ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಭಗವಾನ್ ಶ್ರೀ ವಿಶ್ವಕರ್ಮ ಜಯಂತೋತ್ಸವವನ್ನು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮತಕ್ಷೇತ್ರದ ಶಾಸಕ ಶ್ರೀ ಸಿದ್ದು ಸವದಿ ಅವರು ಭಾಗವಹಿಸಿ
ಜಯಂತ್8


ಬಾಗಲಕೋಟೆ, 17 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಭಗವಾನ್ ಶ್ರೀ ವಿಶ್ವಕರ್ಮ ಜಯಂತೋತ್ಸವವನ್ನು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮತಕ್ಷೇತ್ರದ ಶಾಸಕ ಶ್ರೀ ಸಿದ್ದು ಸವದಿ ಅವರು ಭಾಗವಹಿಸಿ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಸೃಜನಶೀಲತೆ, ಕೌಶಲ್ಯ, ಶ್ರಮ ಹಾಗೂ ಕರಕುಶಲ ಪರಂಪರೆಯ ಪ್ರತೀಕವಾಗಿ ಭಗವಾನ್ ವಿಶ್ವಕರ್ಮರನ್ನು ಸ್ಮರಿಸಿದರು. ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿಯಲ್ಲಿ ವಿವಿಧ ವೃತ್ತಿಪರರು, ಕುಶಲಕರ್ಮಿಗಳು ಹಾಗೂ ಕಾರ್ಮಿಕ ಸಮುದಾಯದ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದರು.

ವಿಶ್ವಕರ್ಮ ಜಯಂತಿಯ ಅಂಗವಾಗಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆಡಳಿತದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ, ವಿಶ್ವಕರ್ಮ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಶಾಸಕ ಸಿದ್ದು ಸವದಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯಂತೋತ್ಸವದ ಶುಭಾಶಯಗಳನ್ನು ಕೋರಿದರು. ವಿಶ್ವಕರ್ಮ ಸಮುದಾಯದ ಪರಂಪರಿ ಕಲೆ, ಕೌಶಲ್ಯ ಮತ್ತು ವೃತ್ತಿ ಪರಂಪರೆಯನ್ನು ಉಳಿಸಿ ಬೆಳೆಸುವ ಅಗತ್ಯದ ಕುರಿತು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande