
ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡುವ ಸಂಬಂಧ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪರಿಶಿಷ್ಟ ಜಾತಿಯ 04 ಹಾಗೂ ಪರಿಶಿಷ್ಟ ಪಂಗಡದ 03 ಸೇರಿದಂತೆ ಒಟ್ಟು 07 ಗುರಿಗಳಿಗೆ ಅರ್ಹತಾ ಪಟ್ಟಿ, ಅನರ್ಹ ಪಟ್ಟಿ, ತಾತ್ಕಾಲಿಕ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಎಲ್ಲಾ ಪಟ್ಟಿಗಳನ್ನು ಕಮಲಾಪುರದ ಲೋಟಸ್ ಮಹಲ್ ಸಮೀಪವಿರುವ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿತ ಪಟ್ಟಿಗೆ ಸಾರ್ವಜನಿಕರು ಅಥವಾ ಅರ್ಜಿದಾರರು ಯಾವುದೇ ಆಕ್ಷೇಪಣೆಗಳನ್ನು ಹೊಂದಿದ್ದಲ್ಲಿ, 24.09.2026 ರೊಳಗಾಗಿ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಕಮಲಾಪುರದ ಪ್ರವಾಸೋದ್ಯಮ ಇಲಾಖೆಯ ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08394-295640 ಅನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್