
ಹುಬ್ಬಳ್ಳಿ, 17 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶ ಸೇವೆಯಲ್ಲಿ ಇನ್ನಷ್ಟು ಹೆಚ್ಚಿನ ಶಕ್ತಿಗಾಗಿ ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹನುಮಂತ ದೇವರು, ಗಣೇಶ, ಸುಬ್ರಹ್ಮಣ್ಯ ಸ್ವಾಮಿ ಹಾಗೂ ಶ್ರೀ ರಾಮಚಂದ್ರ ಸ್ವಾಮಿಯವರ ದರ್ಶನ ಪಡೆದು ಪ್ರಧಾನಿ ಮೋದಿ ಅವರಿಗಾಗಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಿಯವರ ಎಲ್ಲಾ ಸಂಕಲ್ಪಗಳು ಸಿದ್ಧಿಯಾಗಲಿ ಮತ್ತು ಆ ಮಾರ್ಗದಲ್ಲಿ ಬರುವ ಎಲ್ಲಾ ವಿಘ್ನಗಳನ್ನು ವಿಘ್ನಹಾರಿ ಗಣೇಶನು ನಿವಾರಣೆ ಮಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
'ಸಬ್ಕಾ ಸಾಥ್, ಸಬ್ಕಾ ವಿಕಾಸ್', ಆತ್ಮನಿರ್ಭರ ಭಾರತ ಹಾಗೂ ವಿಕಸಿತ ಭಾರತದ ಕಲ್ಪನೆಯು ಸಂಪೂರ್ಣವಾಗಿ ಸಾಕಾರಗೊಳ್ಳಲಿ. ದೇಶದ 130 ಕೋಟಿ ಜನರ ಹಾರೈಕೆ ಮತ್ತು ಆಶೀರ್ವಾದ ಪ್ರಧಾನಿ ಮೋದಿಯವರ ಬೆನ್ನಿಗೆ ಸದಾ ಇರಲಿ, ದೇಶದ ಅಭಿವೃದ್ಧಿಗೆ ಎದುರಾಗುವ ಎಲ್ಲಾ ವಿಘ್ನಗಳು ನಿವಾರಣೆಯಾಗಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ 'ವಿಕಸಿತ ಭಾರತ'ದ ನಿರ್ಮಾಣದ ಕನಸು ಸಾಕಾರಗೊಳ್ಳಲೆಂದು ಭಗವಂತನಲ್ಲಿ ಪ್ರಾರ್ಥನೆ ಮಾಡಿದ್ದೇನೆ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.