ಸೇವಾ ಸಂಕಲ್ಪ ಅಭಿಯಾನಕ್ಕೆ ಚಾಲನೆ: ಬಾಗಲಕೋಟೆಯ ವಿವಿಧ ದೇವಸ್ಥಾನಗಳಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಗಲಕೋಟೆ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಹಾಗೂ ಮುಖ್ಯಮಂತ್ರಿಯಾಗಿ ಮತ್ತು ಪ್ರಧಾನಮಂತ್ರಿಯಾಗಿ ಸತತ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’
ಸಭೆ


ಬಾಗಲಕೋಟೆ, 17 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಹಾಗೂ ಮುಖ್ಯಮಂತ್ರಿಯಾಗಿ ಮತ್ತು ಪ್ರಧಾನಮಂತ್ರಿಯಾಗಿ ಸತತ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ ನೀಡಲಾಯಿತು.

ಅಭಿಯಾನದ ಅಂಗವಾಗಿ ಬಾಗಲಕೋಟೆ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಕಿಲ್ಲಾ ಓಣಿಯ ಶ್ರೀ ಗಣಪತಿ ದೇವಸ್ಥಾನ, ಶ್ರೀ ಕೊತ್ತಲೇಶ ದೇವಸ್ಥಾನ, ಶ್ರೀ ಶಿವಾಲಯ ದೇವಸ್ಥಾನ, ಶ್ರೀ ಅಂಬಾ ಭವಾನಿ ದೇವಸ್ಥಾನ, ಶ್ರೀ ಗ್ರಾಮದೇವತೆ ದೇವಸ್ಥಾನ ಹಾಗೂ ಶ್ರೀ ಗುರು ರಾಘವೇಂದ್ರ ಮಠಗಳಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ವೀರಣ್ಣ ಚರಂತಿಮಠ, ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಬಾಗಲಕೋಟೆ ಮತಕ್ಷೇತ್ರದಲ್ಲಿಯೂ ‘ಸೇವಾ ಸಂಕಲ್ಪ ಅಭಿಯಾನ’ದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ಭಾರತದ ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಅವರ ಸಾರ್ವಜನಿಕ ಸೇವೆಯನ್ನು ಸ್ಮರಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಜನ್ಮದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸೇವಾ ಕಾರ್ಯಗಳ ಮೂಲಕ ಆಚರಿಸುವ ಸಂಕಲ್ಪವನ್ನು ಬಿಜೆಪಿ ಕಾರ್ಯಕರ್ತರು ಕೈಗೊಂಡಿದ್ದಾರೆ ಎಂದು ತಿಳಿಸಿದರು.

ದೇವಸ್ಥಾನಗಳಲ್ಲಿ ನಡೆದ ವಿಶೇಷ ಪೂಜೆ ಹಾಗೂ ಅಭಿಷೇಕ ಕಾರ್ಯಕ್ರಮಗಳಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಅಭಿವೃದ್ಧಿ, ಜನರ ಕಲ್ಯಾಣ ಹಾಗೂ ರಾಷ್ಟ್ರದ ಪ್ರಗತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬಸವರಾಜ ಯಂಕಂಚಿ, ಬಸವರಾಜ ಹುನಗುಂದ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande