
ಮದ್ದೂರು, 17 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ತಾಲ್ಲೂಕು ಕ್ರೀಡಾಂಗಣದಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಮ್ಮೇಳನವನ್ನು ಉದ್ಘಾಟಿಸಿದರು.
ಸಮ್ಮೇಳನದ ಅಂಗವಾಗಿ ಉಗ್ರನರಸಿಂಹ ಸ್ವಾಮಿ ದೇವಾಲಯದಿಂದ ಸಮ್ಮೇಳನಾಧ್ಯಕ್ಷೆ ಕೆಂಪಮ್ಮ ಅವರನ್ನು ಬೆಳ್ಳಿರಥದಲ್ಲಿ ಕರೆದೊಯ್ಯಲಾಯಿತು. ವಿವಿಧ ಕಲಾತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಮ್ಮೇಳನದ ವೇದಿಕೆಗೆ ಆಗಮಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, “ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗೆ ಇಂತಹ ಸಾಹಿತ್ಯ ಸಮ್ಮೇಳನಗಳು ಮಹತ್ವದ ವೇದಿಕೆಯಾಗಿವೆ. ಕನ್ನಡದ ಮೇಲಿನ ಅಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.
ಸಮ್ಮೇಳನದಲ್ಲಿ ಶಾಸಕ ಕದಲೂರು ಉದಯ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಸಮ್ಮೇಳನಾಧ್ಯಕ್ಷೆ ಕೆಂಪಮ್ಮ ಸೇರಿದಂತೆ ಹಲವು ಗಣ್ಯರು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು. ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R