ಬಳ್ಳಾರಿ ಗ್ರಾಮಾಂತರ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಬಳ್ಳಾರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಬರುವ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಗೌರವ ಸೇವಾ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ
ಬಳ್ಳಾರಿ ಗ್ರಾಮಾಂತರ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ


ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಬಳ್ಳಾರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಬರುವ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಗೌರವ ಸೇವಾ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಬಳ್ಳಾರಿ ಗ್ರಾಮಾಂತರ ಯೋಜನೆಯ ವ್ಯಾಪ್ತಿಯಲ್ಲಿ ಒಟ್ಟು 11 ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಆಯಾ ಗ್ರಾಮ ಅಥವಾ ವಾರ್ಡ್ನ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಖಾಲಿ ಇರುವ ಹುದ್ದೆಗಳ ವಿವರಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯತ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮುಚ್ಚಿದ ಲಕೋಟೆಯಲ್ಲಿ (ರಜಾ ದಿನಗಳನ್ನು ಹೊರತುಪಡಿಸಿ) 15-10-2026 ರ ಸಂಜೆ 5:30 ರೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ (ಗ್ರಾಮಾಂತರ) ದೂರವಾಣಿ ಸಂಖ್ಯೆ: 8971982008, 08392-266080 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande