
ಮಂಡ್ಯ, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇಯ ಫ್ಲೈಓವರ್ನಿಂದ ಕಾರೊಂದು ನಿಯಂತ್ರಣ ತಪ್ಪಿ ಕೆಳಗಿನ ಅಂಡರ್ ಪಾಸ್ ರಸ್ತೆಗೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಸಮೀಪ ಶುಕ್ರವಾರ ನಡೆದಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್ನಿಂದ ಹಾರಿ ಕೆಳಗಿನ ಅಂಡರ್ಪಾಸ್ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರ ಪತಿ ಹಾಗೂ ಮತ್ತೊಬ್ಬ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಾಳುಗಳನ್ನು ತಕ್ಷಣ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆ ಹಿನ್ನೆಲೆಯಲ್ಲಿ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R